ಬ್ಯಾಡಗಿಯಲ್ಲಿ ಮಿಶ್ರಪ್ರತಿಕ್ರಿಯೆ

Published on

ಬ್ಯಾಡಗಿ: ಕರ್ನಾಟಕ ಬಂದ್ ಬೆಂಬಲಿಸಿ ರೈತ ಸಂಘ, ಜಯ ಕರ್ನಾಟಕ ಸಂಘಟನೆ, ಕರವೇ, ಕಾಂಗ್ರೆಸ್ ತಾಲೂಕು ಘಟಕ ಕಾರ್ಯಕರ್ತರು ತಹಸೀಲ್ದಾರ್ ಕಾರ್ಯಾಲಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ್ ಕೆ. ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು. ರುದ್ರಗೌಡ್ರ ಕಾಡನಗೌಡ್ರ, ಮಲ್ಲಿಕಾರ್ಜುನ ಕರಿಲಿಂಗಣ್ಣನವರ ಮಾತನಾಡಿದರು. ಪ್ರತಿಭಟನೆಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂಗಡಿ-ಮುಂಗಟ್ಟು, ಆಟೋಗಳು, ಬಸ್​ಗಳ ಸಂಚಾರ, ಸರ್ಕಾರಿ ಕಚೇರಿಗಳ ಕಾರ್ಯ ಎಂದಿನಂತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net