ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಿಣಿ ಸಭೆ

DVG-BRAMHANA-24.jpg
Published on

ದಾವಣಗೆರೆ: ಬ್ರಾಹ್ಮಣ ಸೇವಾ ಸಂಘದ ಸಹಯೋಗದಲ್ಲಿ ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರ ಸಮುದಾಯ ಭವನದಲ್ಲಿ ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬ್ರಾಹ್ಮಣ ಸಮಾಜ ಸಾಮಾಜಿಕ, ಆರ್ಥಿಕ, ಹಾಗೂ ಶೈಕ್ಷಣಿಕವಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ ಅಶೋಕ್ ಹಾರನಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಡಾ.ಬಿ.ಟಿ.ಅಚ್ಯುತ್, ಮಾಜಿ ಅಧ್ಯಕ್ಷ ಎಸ್.ಆರ್. ಹೆಗಡೆ, ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಡಾ.ಎಂ.ಸಿ. ಶಶಿಕಾಂತ್, ಉಪಾಧ್ಯಕ್ಷ ಡಾ. ಆನಂದತೀರ್ಥಾಚಾರ್, ಕಾರ್ಯದರ್ಶಿ ಗೋಪಾಲದಾಸ್, ಉಮೇಶ್ ಕುಲಕರ್ಣಿ ಇತರರು ಇದ್ದರು.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net