

ಮೈಸೂರು: ನಾಡಹಬ್ಬ ದಸರಾ-2023 ಅಂಗವಾಗಿ ಪ್ರವಾಸೋದ್ಯಮ ಇಲಾಖೆಯಿಂದ ‘ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ’ ಆಯೋಜನೆ ಮಾಡಲಾಗಿದೆ.
ಆಕರ್ಷಕ ಲೋಗೋ, ಒಂದು ಸಾಲುನುಡಿ, ಶುಭ ಸಂದೇಶ, ಮೈಸೂರಿನ ನೆಚ್ಚಿನ ತಾಣದ ಬಗ್ಗೆ ಬರಹ ಸ್ಪರ್ಧೆಯ ವಿಷಯವಾಗಿದೆ. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಬಹುಮಾನ ನೀಡಲಾಗುತ್ತದೆ. ಮೊದಲ ಬಹುಮಾನ 30 ಸಾವಿರ ನಗದು, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 5 ಸಾವಿರ ರೂ. ನಿಗದಿ ಮಾಡಲಾಗಿದೆ. ನೋಂದಣಿಗೆ ಆಗಸ್ಟ್ 31 ಕೊನೆ ದಿನವಾಗಿದೆ. ಮಾಹಿತಿ ಹಾಗೂ ನೋಂದಣಿಗೆ ್ಚಟಞಛಿಠಿಜಿಠಿಜಿಟ್ಞಃಚ್ಟ್ಞಠಿಠಿಟ್ಠ್ಟಜಿಞ.ಟ್ಟಜ ಸಂಪರ್ಕಿಸಬಹುದು.
ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆಯ ಭಿತ್ತಿಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್, ಮೇಯರ್ ಶಿವಕುಮಾರ್, ಸಂಸದ ಪ್ರತಾಪಸಿಂಹ, ಶಾಸಕ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಟಿ.ಎಸ್.ಶ್ರೀವತ್ಸ, ಎಂಎಲ್‌ಸಿಗಳಾದ ಎಚ್.ವಿಶ್ವನಾಥ್, ಸಿ.ಎನ್.ಮಂಜೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್ ಇತರರು ಭಾಭಾನುವಾರ ಅನಾವರಣಗೊಳಿಸಿದರು.