

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗುವಂತೆ ಸೂಚನೆ ನೀಡಲಾಗುತ್ತಿತ್ತು.
ಸದ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆಗೆ ಬೇಕಾದ ಔಷಧ ಜಿಲ್ಲೆಗೆ ಹಂಚಿಕೆಯಾಗಿದ್ದು, ಬುಧವಾರದಿಂದ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ 8 ರಿಂದ 10 ಪ್ರಕರಣಗಳಿವೆ ಎಂದು ಹಿರೇಮಠ ಮಾಹಿತಿ ನೀಡಿದರು.