ಭಗತ್‌ಸಿಂಗ್ ಜನ್ಮದಿನಾಚರಣೆ ಕಾರ್ಯಕ್ರಮ

27rajesh1
Published on

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಭಗತ್ ಸಿಂಗ್ ಯುವಸೇನೆ ವತಿಯಿಂದ ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶನಿವಾರ ಅವರ 118ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ಭಗತ್ ಸಿಂಗ್ ಅವರು 23ನೇ ವಯಸ್ಸಿಗೆ ಸ್ವಾತಂತ್ರ್ಯಕ್ಕೋಸ್ಕರ ಕೆಚ್ಚೆದೆಯಿಂದ ಬ್ರಿಟಿಷರ ವಿರುದ್ಧ ಹೋರಾಡಿ ನಮ್ಮ ದೇಶಕ್ಕೆ ಪ್ರಾಣತ್ಯಾಗ ಮಾಡಿದ ಧೀರ ಹುತಾತ್ಮ. ಇಂದಿನ ಯುವಕರು ಇಂತಹ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಜೀವನವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ದೇಶದ ಏಕತೆ ಮತ್ತು ಸೌಹಾರ್ದತೆಗೆ ಶ್ರಮಿಸಬೇಕು. ಪ್ರಬುದ್ಧ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ವೇಳೆ ಭಗತ್‌ಸಿಂಗ್‌ಯುವಸೇನೆ ಉಪಾಧ್ಯಕ್ಷ ಮಹೇಶ್, ರಾಜು, ಕೃಷ್ಣ, ಮಹೇಶ್‌ಕುಮಾರ್, ಮಲ್ಲೇಶ್, ವಿಷಕಂಠ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net