ಭಗವಾ ಧ್ವಜ ಹಾರಿಸಿದ ನಾಲ್ವರ ಬಂಧನ

Arrest
Published on

ಬಸವಕಲ್ಯಾಣ: ಧನ್ನೂರ ಕೆ ಗ್ರಾಮದಲ್ಲಿ ಇತ್ತೀಚೆಗೆ ಮಸೀದಿ ಮೇಲೆ ಭಗವಾ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಭAಧಿಸಿದAತೆ ಭಾನುವಾರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗ್ರಾಮದಲ್ಲಿ ಸೆ.೨೧ರಂದು ಪ್ರಕರಣ ಜರುಗಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಹುಮನಾಬಾದ್ ಡಿವೈಎಸ್‌ಪಿ ಜೆ.ಎಸ್ ನ್ಯಾಮೇಗೌಡರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಜ್ಞಾನಿಕ ಸಾಕ್ಷಿಧಾರಗಳನ್ನು ಕಲೆ ಹಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net