ಭಗವಾನ್ ಬುದ್ಧ ಜಯಂತಿ 12ಕ್ಕೆ

budda
Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ದ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 12ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9.30 ಗಂಟೆಗೆ ನಗರದ ಸಾರಾನಾಥ ಬೌದ್ದವಿಹಾರದ ಬಳಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬೆಳಗ್ಗೆ 11.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತಿ.ನರಸೀಪುರದ ಲುಂಬಿನಿ ಬೌದ್ಧ ವಿಹಾರದ ಭಂತೆ ಸಮಣಪಾಲ ಅವರು ದಿವ್ಯಸಾನ್ನಿಧ್ಯ ವಹಿಸುವರು. ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ, ನಗರಸಭೆ ಉಪಾಧ್ಯಕ್ಷೆ ಮಮತಾ ಪಾಲ್ಗೊಳ್ಳುವರು. ನಗರದ ಸಾಹಿತಿ ಡಾ. ಬಿ.ಆರ್. ಕೃಷ್ಣಕುಮಾರ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net