ಭದ್ರತೆ ಒದಗಿಸಲು ಒತ್ತಾಯ

13MDG3
Published on

ಮುಂಡರಗಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಶಾ ಕಾರ್ಯಕರ್ತೆಯರು ತಾಪಂ ಯೋಜನಾ ನಿರ್ದೇಶಕ ಎಂ.ಎಸ್. ಕೊರ್ಲಹಳ್ಳಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಅಲ್ಲದೆ, ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಭಾಗದ ಸಮುದಾಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ಮಾಸಿಕ ಕನಿಷ್ಠ 12 ಸಾವಿರ ರೂ.ಗೌರವಧನ ನೀಡಬೇಕು. ವೇತನದ ಹಳೇ ಬಾಕಿ ಪಾವತಿಸಬೇಕು. ಆರೋಗ್ಯ ರಕ್ಷಣೆ ಹಾಗೂ ಮತ್ತಿತರ ಕಾರ್ಯ ಕ್ಷೇತ್ರಕ್ಕೆ ತೆರಳುವ ಕಾರ್ಯಕರ್ತೆಯರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ತಾಲೂಕು ಆಶಾ ಕಾರ್ಯಕರ್ತೆಯರ ಸಂಪನ್ಮೂಲ ಘಟಕದ ಅಧ್ಯಕ್ಷೆ ಪಾರ್ವತಿ ಹರ್ಲಾಪೂರ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net