ಭದ್ರಾ ಕಾಮಗಾರಿ ತ್ವರಿತ ಪೂರ್ಣಕ್ಕೆ ಆಗ್ರಹ

Bhadra
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು. ಕಾಮಗಾರಿ ವಿಳಂಬ ಮಾಡದೆ, ಶೀಘ್ರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಪಿಎಂ, ಸಿಎಂಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಬರಪೀಡಿತ ಪ್ರದೇಶವಾದ ಚಿತ್ರದುರ್ಗ ಜಿಲ್ಲೆಯ ರೈತರು ಮಳೆಯನ್ನೇ ನೆಚ್ಚಿಕೊಂಡಿದ್ದು, ಅತಿವೃಷ್ಟಿ, ಅನಾವೃಷ್ಟಿ ಎರಡರಿಂದಲೂ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ 2024ರ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ನೀರು ಹರಿಸಬೇಕು. ಸಚಿವರು, ಸಂಸದರು, ಶಾಸಕರು ಪಕ್ಷ ಬೇಧ ಮರೆತು ಈ ಕುರಿತು ಗಮನಹರಿಸಬೇಕು ಎಂದು ಕೋರಿದರು.

ವೇದಿಕೆ ರಾಜ್ಯ ಅಧ್ಯಕ್ಷ ಎನ್.ಅರುಣ್‌ಕುಮಾರ್, ಜಿಲ್ಲಾ ಅಧ್ಯಕ್ಷ ರವಿಕುಮಾರ್ ನಾಯ್ಕ, ಪದಾಧಿಕಾರಿಗಳಾದ ಅಶೋಕ್, ಆಶಾ, ಟಿ.ಸ್ವಾಮಿ, ಅಶ್ವಿನಿ, ರೇಣುಕಾ, ಲಕ್ಷ್ಮೀ, ಗೀತಾಂಜಲಿ, ಸಿ.ಸತೀಶ್, ಸಿ.ಓಬಳೇಶ್‌ಯಾದವ್, ಎನ್.ಓಬಣ್ಣ, ಮುತ್ತಯ್ಯ, ಸೈಯದ್ ಅಲಿ, ಆಶಾ, ಇ.ಎನ್.ಲಕ್ಷ್ಮಿಕಾಂತ, ಏಕಾಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net