

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ಕೂಡ ಚಿತ್ರದುರ್ಗದಲ್ಲಿ ಮುಂದುವರೆಯಿತು.
ಹಿರಿಯೂರು ಭಾಗದ ರೈತರು ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಈಚಘಟ್ಟ ಸಿದ್ದವೀರಪ್ಪ, ನಿಜಲಿಂಗಪ್ಪ, ತಿಪ್ಪೇಸ್ವಾಮಿ, ರಾಮಣ್ಣ, ತಿಮ್ಮಯ್ಯ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ದಾಸಪ್ಪ, ಲಕ್ಷ್ಮಿದೇವಿ, ಈರಮ್ಮ, ಚಂದ್ರಮ್ಮ, ಕರಿಯಮ್ಮ, ರತ್ನಮ್ಮ ಇತರರಿದ್ದರು.