ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಿತ್ರದುರ್ಗ ಬಂದ್

CTD BAND
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ನೀರಾವರಿ ಯೊ ೀಜನಾ ಅನುಷ್ಠಾ ನ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ಸ್ವಯಂ ಪ್ರೇರಿತ ಬಂದ್‌ಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದ್ದು,ಬಂದ್ ಬಹುತೇಕ ಯಶಸ್ವಿ ಯತ್ತ ಸಾಗಿದೆ.
ರೈತ,ಕಾರ್ಮಿಕ,ವರ್ತಕ,ಆಟೋ,ಟ್ಯಾಕ್ಸಿ,ಬಸ್ ಮಾಲೀಕರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ನಗರ,ಜಿಲ್ಲೆಯ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ನಗರದ ಗಾಂಧಿವೃತ್ತದಲ್ಲಿ ಬೆಳಗ್ಗೆಯಿಂದಲೇ ಜಮಾಯಿಸಿದ್ದ ಪ್ರತಿಭಟನಾನಿರತರು ಸರ್ಕಾರಗಳ ನಿರ್ಲಕ್ಷೃ ಧೋರಣೆಯನ್ನು ಖಂಡಿಸಿ ದರು. ಬಿಡಿ ರಸ್ತೆ ಸೇರಿದಂತೆ ನಗರದ ನಾನಾ ಪ್ರಮುಖ ವಾಣಿಜ್ಯ ಕೇಂದ್ರಗಳು ಬಂದ್ ಆಗಿದ್ದವು. ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು, ಹಲವು ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿದಂತೆ ಕಾಂಗ್ರೆಸ್ ಹಲವು ಪ್ರಮುಖರು, ಶಾಸಕರು ಭಾ ಗಿಆಗಿದ್ದು, ಪ್ರತಿಭಟನಾ ಸ್ಥಳಕ್ಕೆ ತಾವು ಭೇಟಿ ಕೊಡುವುದಾಗಿ ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ತಮ್ಮ ಸಂಪೂರ್ಣ ಸಹಕಾರ ಇದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಬಿಜೆಪಿ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net