ಭದ್ರಾ ಮೇಲ್ದಂಡೆಗೆ ಸಹಕರಿಸುವೆ

Raithasangha
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಸಂಬಂಧ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರನ್ನು ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾಗಿ ಮನವಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಸ್ತುಸ್ಥಿತಿ ಮನವರಿಗೆ ಮಾಡಿಕೊಟ್ಟಬು ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜೋಶಿ ಭರವಸೆ ನೀಡಿದರು. ಮುಖಂಡರಾದ ನಿಜಲಿಂಗಪ್ಪ, ಕಬ್ಬಗೆರೆ ನಾಗರಾಜ್, ಎಚ್.ಆರ್. ತಿಮ್ಮಯ್ಯ, ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್, ಕೊಟ್ರಬಸಪ್ಪ, ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net