ಭದ್ರೆಗೆ ಕರೆಂಟ್‌ ಸಮಸ್ಯೆ ಆಗದಿರಲಿ

GOVINDAPPA_CONGRESS
Published on

ಚಿತ್ರದುರ್ಗ: ಮಹತ್ವಕಾಂಕ್ಷೆಯ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿವಿಧೆಡೆ ಪೂರ್ಣಗೊಳ್ಳುವ ಹಂತ ತಲುಪಿದ್ದು, ನಾಲೆಗಳಲ್ಲಿ ನೀರು ಹರಿಸಲು ಪಂಪ್‌ಹೌಸ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ತುರ್ತು ಅಗತ್ಯ ಎದುರಾಗಿದೆ ಎಂದು ಜಿಪಂ ಸಭಾಂಗಣದಲ್ಲಿ ನಡೆದ ಬೆಸ್ಕಾಂ ಕುಂದು-ಕೊರತೆ ಸಭೆಯಲ್ಲಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.

ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳದೆ, ಕೊನೆ ಕ್ಷಣದಲ್ಲಿ ವಿದ್ಯುತ್ ನೆಪ ಮುಂದಿಟ್ಟರೆ, ರೈತ ಸಮುದಾಯದ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಗಮನ ಸೆಳೆದರು.

ಈ ಭಾಗದ ಬಹುನಿರೀಕ್ಷಿತ ಯೋಜನೆ ಇದಾಗಿದ್ದು, ನೀರು ಹರಿಸುವ ವೇಳೆ ವಿದ್ಯುತ್ ಸಮಸ್ಯೆ ಉಂಟಾಗಬಾರದು. ವಿಶ್ವೇಶ್ವರಯ್ಯ ಜಲನಿಗಮ ಹಾಗೂ ನೀರಾವರಿ ಇಲಾಖೆ ಇಂಜಿನಿಯರ್‌ಗಳ ಜೊತೆ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳಲಿದ್ದೇವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net