ಭಯ ಬೇಡ, ಮುನ್ನೆಚ್ಚರಿಕೆವಹಿಸಿ

madras eye
Published on

ಕಲಬುರಗಿ: ಕಂಜಕ್ಟಿವೈಟೀಸ್ ಇದು ಒಂದು ವೈರಸ್‌ನಿಂದ ಹರಡುವ ಕಾಯಿಲೆ. ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆ ಹೆಚ್ಚು. ಈ ಕಾಯಿಲೆ ಕುರಿತು ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಸಾಕು ಎಂದು ಕಲಬುರಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜಶೇಖರ ಮಾಲಿ ತಿಳಿಸಿದ್ದಾರೆ.
ಕಣ್ಣಿನ ಬಿಳಿಭಾಗ ಆವರಿಸುವ, ಕಣ್ಣಿನ ಮುಂಭಾಗದಲ್ಲಿ ಇರುವ ಪದರ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟಿವೈಟೀಸ್ ಎಂದು ಕರೆಯುತ್ತಾರೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೂ ಈ ಕಾಯಿಲೆ ಹರಡಲಿದೆ.
ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶ ಹಾಗೂ ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯ ಮತ್ತು ಅತಿಥಿ ಗೃಹಗಳಲ್ಲಿ (ಪಿಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚಿದ್ದು, ೩ ರಿಂದ ೫ ದಿನಗಳಲ್ಲಿ ಗುಣ ಮುಖವಾಗಲಿದೆ.

ಕಾಯಿಲೆ ಲಕ್ಷಣ
ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮಂಜು, ಕಣ್ಣಿನ ಎರಡೂ ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣ ಕಂಡು ಬಂದಲ್ಲಿ ತಕ್ಷಣ ತಮ್ಮ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ, ಸಲಹೆ ಪಡೆಯಬೇಕು. ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿAದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣು ಸ್ವಚ್ಚಗೊಳಿಸಬೇಕು. ವೈದ್ಯರ ಸಲಹೆ ಮೇರೆಗೆ ಔಷಧಿ ಬಳಸಬೇಕು. ಶಾಲೆ, ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತç ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಆಗಾಗ ಕಣ್ಣು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net