

ಚಿಕ್ಕಮಗಳೂರು: ಕಾಶ್ಮೀರದ ಕಣಿವೆಯಲ್ಲಿ ಗುಂಡಿನ ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ ಭಯೋತ್ಪಾದಕರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಭಾರತದಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಭದ್ರ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ತಿಳಿಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಸಂಜೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್‌ನಿAದ ಆಯೋಜಿಸಲಾಗಿದ್ದ ಕಾಶ್ಮೀರ ಕಣಿವೆಯಲ್ಲಿ ನಡೆದ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಪತ್ತೆ ಮಾಡಿ ಕ್ರಮ ಜರುಗಿಸಬೇಕು ಎಂದರು.
ಭಾರತ ದೇಶಕ್ಕೆ ತನ್ನದೇ ಆದ ಇತಿಹಾಸವಿದೆ. ಹಿಂದಿನಿAದಲೂ ಶಾಂತಿಯನ್ನೇ ಸಾರುತ್ತಾ ಬಂದಿದೆ. ಆದರೆ ಈ ರೀತಿಯ ಕೃತ್ಯಗಳನ್ನು ನಡೆಸುವ ಮೂಲಕ ಭಾರತದಲ್ಲಿನ ಬಾಂಧವ್ಯವನ್ನು ಕದಡುವ ಕೆಲಸ ಮಾಡಲಾಗುತ್ತಿದೆ. ಮುಂದೆ ದೇಶದಲ್ಲಿ ಎಲ್ಲಿಯೂ ಈ ರೀತಿಯ ಕೃತ್ಯ ನಡೆಯದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಮ್ಮವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ಭಾರತದ ನಾಗರಿಕರ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ಮೇಲೆಯೂ ಗುಂಡಿನ ದಾಳಿ ನಡೆಸುವ ಮೂಲಕ ತಕ್ಕ ಉತ್ತರ ನೀಡಬೇಕು. ಕೇವಲ ಭಯೋತ್ಪಾದಕರು ಮಾತ್ರವಲ್ಲ ಅವರಿಗೆ ಕುಮ್ಮಕ್ಕು ನೀಡಿದ ಉಗ್ರ ಸಂಘಟನೆಗಳ ಮೇಲೆಯೂ ದಾಳಿ ನಡೆಸಬೇಕು ಎಂದು ಒತ್ತಾಯಿಸಿದರು.
ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಮಾತನಾಡಿ, ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಈ ವಿಷಯದಲ್ಲಿ ಪಕ್ಷ ಬೇಧ ಮರೆತು ಎಲ್ಲ ಪಕ್ಷದವರೂ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸುತ್ತೇವೆ. ಉಗ್ರರ ವಿರುದ್ಧ ಕಾರ್ಯಾಚರಣೆ ಶೀಘ್ರವಾಗಿ ಆರಂಭಿಸಬೇಕು ಎಂದರು.
ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಕಾಶ್ಮೀರಕ್ಕೆ ತೆರಳಿ ಮೃತರ ಕುಟುಂಬದವರ ನೆರವಿಗೆ ನಿಂತಿದ್ದಾರೆ. ಅದೇ ರೀತಿ ಕರ್ನಾಟಕದಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳಿ ಕರ್ನಾಟಕದ ಮೃತರ ಕುಟುಂಬದವರೊAದಿಗಿದ್ದಾರೆ. ಮೃತರ ಕುಟುಂಬಗಳಿಗೆ ಕಾಂಗ್ರೆಸ್ ಎಲ್ಲ ರೀತಿಯ ಸಹಾಯ ಹಸ್ತ ಚಾಚಲಿದೆ ಎಂದು ಹೇಳಿದರು.
ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯ್ ಕುಮಾರ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಬೆಟಗೆರೆ ಪ್ರವೀಣ್ ಮತ್ತಿತರರಿದ್ದರು.