ಭಯೋತ್ಪಾದಕರನ್ನು ಸದೆ ಬಡಿಯಲು ಆಗ್ರಹ

Vijayasene
Published on

ಚಿತ್ರದುರ್ಗ: ಪಹಲ್ಗಾಮ್‌ನಲ್ಲಿ ರಾಜ್ಯದ ಇಬ್ಬರು ಸೇರಿ 26 ಮಂದಿ ಅಮಾಯಕರು ಭಯೋತ್ಪಾದಕರ ದಾಳಿಗೆ ಹತ್ಯೆಯಾಗಿರುವ ದುರ್ಘಟನೆ ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಈ ವಿಚಾರದಲ್ಲಿ ಕೇಂದ್ರ ಗೃಹ ಹಾಗೂ ಗುಪ್ತಚರ ಇಲಾಖೆ ವಿಫಲವಾಗಿದ್ದು, ಕೇಂದ್ರ ಸರ್ಕಾರ ಕಠಿಣ ನಿಲುವು ಪ್ರದರ್ಶಿಸಬೇಕು ಎಂದು ಪಿಎಂ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

2019ರ ಪುಲ್ವಾಮಾ ನಂತರ ಇದು ದೇಶದೊಳಗೆ ನಡೆದ ಎರಡನೇ ಅತ್ಯಂತ ಭೀಕರ ದಾಳಿಯಾಗಿದೆ. ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡಿರುವ ಉಗ್ರರನ್ನು ಸದೆ ಬಡಿಯಬೇಕು. ಈ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ದಾಳಿಯಿಂದ ಹತ್ಯೆಯಾದವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು. ಮೃತರಿಗೆ ತಲಾ 1 ಕೋಟಿ ರೂ. ಪರಿಹಾರ ಕೊಡಬೇಕೆಂದು ಸರ್ಕಾರಕ್ಕೆ ಕೋರಿದರು.

ವಿಜಯಸೇನೆ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾಧ್ಯಕ್ಷೆ ವೀಣಾ ಗೌರಣ್ಣ, ಗೋಪಿನಾಥ್, ಕಮಲಮ್ಮ, ಅವಿನಾಶ್, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್ ಮುತ್ತು, ಶಶಿ, ವಿಜಯಬಾಬು, ಪ್ರದೀಪ್, ಹರೀಶ್‌ಕುಮಾರ್, ಅಖಿಲೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net