ಭರವಸೆಯಂತೆ ಕಾಂಗ್ರೆಸ್‌ನಿಂದ ಸೌಲಭ್ಯ

11-GPT-1-CONGRESS
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಹರವೆ ಹೋಬಳಿಯ ನೂರಾರು ಕಾರ್ಯಕರ್ತರು ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
Published on

ಗುಂಡ್ಲುಪೇಟೆ: ಬಿಜೆಪಿ ದುರಾಡಳಿತದಿಂದ ಜನತೆ ರೋಸಿಹೋಗಿದ್ದು, ಮುಂಬರುವ ಚುನಾವಣೆಯಲ್ಲಿ ಸರ್ಕಾರವನ್ನು ಕಿತ್ತುಹಾಕಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಮಂಗಳವಾರ ವಿಧಾನಸಭಾ ಕ್ಷೇತ್ರದ ಹರವೆ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದಿ.ಮಹದೇವಪ್ರಸಾದ್ ಹಾಗೂ ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ತಾಲೂಕಿನ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದರು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ ಬದುಕು ಕಷ್ಟವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭರವಸೆ ನೀಡಿದ್ದಂತೆ ಸೌಲಭ್ಯ ನೀಡಲಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಜಿಪಂ ಮಾಜಿ ಸದಸ್ಯ ಕೆರೆಹಳ್ಳೀ ನವೀನ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net