ಭವನ ನಿರ್ಮಾಣಕ್ಕೆ ನಿವೇಶನ ಹಸ್ತಾಂತರ

IMG-20230325-WA0203
Published on

ಚನ್ನರಾಯಪಟ್ಟಣ: ಸಂಘಟನೆಗಳು ಹಾಗೂ ಸಮುದಾಯಗಳು ಭವನಗಳನ್ನು ನಿರ್ಮಾಣ ಮಾಡಿಕೊಂಡರೆ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುತ್ತದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

ಪಟ್ಟಣದ ನಗರ ಯೋಜನಾ ಪ್ರಾಧಿಕಾರದ ಕಚೇರಿಯ ಸಮೀಪದಲ್ಲಿ ಸರ್ಕಾರಿ ಜಮೀನನ್ನು ವಿವಿಧ ಸಮುದಾಯ ಹಾಗೂ ಸಂಘಟನೆಗಳಿಗೆ ಭವನಗಳ ನಿರ್ಮಾಣಕ್ಕೆ ನಿವೇಶನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹಳ ವರ್ಷಗಳಿಂದ ಸಮುದಾಯ ಹಾಗೂ ಸಂಘಟನೆಗಳು ಭವನ ನಿರ್ಮಾಣಕ್ಕೆ ನಿವೇಶನ ಬೇಕೆಂದು ಬೇಡಿಕೆ ಸಲ್ಲಿಸಿದ್ದು ತಾಲೂಕು ಆಡಳಿತ ಹಾಗೂ ಕಂದಾಯ ಇಲಾಖೆ ಸಹಕಾರದೊಂದಿಗೆ ಸರ್ಕಾರಿ ಜಮೀನನ್ನು ಗುರುತಿಸಿ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳಿಗೆ ಭವನ ನಿರ್ಮಾಣಕ್ಕೆ ನಿವೇಶನ ನೀಡಲಾಗುತ್ತಿದೆ. ಉಳಿದ ಸಂಘಟನೆಗಳಿಗೆ ದಾಖಲಾತಿ ಒದಗಿಸಿದ ನಂತರ ಹಸ್ತಾಂತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ರೇಖಾ ಅನಿಲ್, ಮಾಜಿ ಅಧ್ಯಕ್ಷರಾದ ಸುರೇಶ್, ನವೀನ್ ಪುರಸಭಾ ಸದಸ್ಯರು ಗ್ರೇಡ್ 2 ತಹಸೀಲ್ದಾರ್ ನಟರಾಜ್, ರಾಜಸ್ವ ನೀರಿಕ್ಷಕ ಮಂಜುನಾಥ್, ವಿವಿಧ ಸಂಘಟನೆ ಹಾಗೂ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net