ಭವಿಷ್ಯ ರೂಪಿಸುವಲ್ಲಿ ಸಂಸ್ಕಾರ ಮುಖ್ಯ

2104KLB07
Published on

ಕಲಬುರಗಿ: ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನದ ಮೂಲಕ ಭವಿಷ್ಯದ ಜೀವನ ಕಟ್ಟಿಕೊಳ್ಳಲು ಸಂಸ್ಕಾರಯುತ ಶಿಕ್ಷಣ ಮುಖ್ಯ ಎಂದು ಪಿಡಿಎ ತಾಂತ್ರಿಕ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪದವಿಪೂರ್ವ ಪರೀಕ್ಷೆಯ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯೆ ಕಲಿಸಿದ ತಂದೆ-ತಾಯಿ, ಗುರು ಹಿರಿಯರಿಗೆ ಗೌರವಿಸುವ ಪರಂಪರೆ ಮಕ್ಕಳು ಕಲಿಯಬೇಕು. ಮಾನವೀಯ ಅಂತಃಕರಣ ಬೆಳೆಸುವ ಹಾಗೂ ಜೀವನ ಮೌಲ್ಯ ಬೋಧಿಸುವ ಶಿಕ್ಷಣ ಕಲಿಯಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ವಿದ್ಯಾರ್ಥಿಗಳ ಜೀವನ ತಪಸ್ಸು ಮಾಡಿದಂತೆ. ಎಷ್ಟೇ ಎತ್ತರಕ್ಕೆ ಬೆಳೆದರೂ ನಿರಂತರ ಪ್ರಯತ್ನ ಇರಬೇಕು. ಆಗ ಮಾತ್ರ ಮುನ್ನಡೆ ಸಾಧಿಸಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ನಿರಂತರ ಪ್ರಯತ್ನ ನಮ್ಮ ಯಶಸ್ಸಿನ ಮೆಟ್ಟಿಲು ಎಂದರು.
ಮಹಿಳಾ ಪತಂಜಲಿ ಯೋಗ ಸಮಿತಿ ಸಂವಾದ ಪ್ರಭಾರಿ ಸುಮಂಗಲಾ ಚಕ್ರವರ್ತಿ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಶಿವರಾಜ ಎಸ್ ಅಂಡಗಿ, ಧರ್ಮಣ್ಣ ಧನ್ನಿ, ಪ್ರಮುಖರಾದ ರೇವಣಸಿದ್ದಪ್ಪ ಜೀವಣಗಿ, ಮುಡುಬಿ ಗುಂಡೇರಾವ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ರಮೇಶ ಬಡಿಗೇರ, ಮಲ್ಲಿನಾಥ ಸಂಗಶೆಟ್ಟಿ, ಎಚ್.ಎಸ್.ಬರಗಾಲಿ, ಎಂ.ಎನ್.ಸುಗAಧಿ, ರವೀಂದ್ರಕುಮಾರ ಭಂಟನಳ್ಳಿ, ಧರ್ಮರಾಜ ಜವಳಿ, ಸುರೇಶ ದೇಶಪಾಂಡೆ, ಸಂತೋಷ ಕುಡಳ್ಳಿ, ಗುರುಬಸಪ್ಪ ಸಜ್ಜನಶೆಟ್ಟಿ, ಪ್ರಭುಲಿಂಗ ಮೂಲಗೆ, ವಿನೋದಕುಮಾರ ಜನೇವರಿ, ಸಿದ್ಧಲಿಂಗ ಬಾಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net