ಭಾಜಪ ಮಹಿಳಾ ವಿರೋಧಿ ಪಕ್ಷ

CTD 8 NEWS CONGRESS--0005
Published on

ಚಿತ್ರದುರ್ಗ: ಮಹಿಳೆಯರಿಗೆ ದೊಡ್ಡ ಶಕ್ತಿಯನ್ನು ಕೊಟ್ಟಿದ್ದು ಕಾಂಗ್ರೆಸ್ ಎಂಬುದನ್ನು ಯಾರು ಮರೆಯುವಂತಿಲ್ಲ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾಂಗ್ರೆಸ್ ಎಸ್ಸಿ ಮಹಿಳಾ ಘಟಕದ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹತ್ತು ವರ್ಷಗಳ ಹಿಂದೆ ಮಹಿಳಾ ಮೀಸಲಾತಿಗೆ ಹೋರಾಟ ನಡೆಸಿದ್ದಾಗ ಬಿಜೆಪಿ ವಿರೋಧಿಸಿತ್ತು ಎಂದು ದೂರಿದರು.
ಉಳುವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸಿದ್ದು ಕಾಂಗ್ರೆಸ್ ಪಕ್ಷ. ಈ ಎಲ್ಲ ವಿಷಯಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಹೆಚ್ಚಿನ ಮತಗಳ ಅಂತರದೊಂದಿಗೆ ಗೆಲ್ಲಿಸಬೇಕು ಎಂದು ತಿಳಿಸಿದರು.
ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ಸಿಗೆ ತತ್ವ, ಸಿದ್ಧಾಂತವಿದೆ. ತ್ಯಾಗ ಬಲಿದಾನದ ಇತಿಹಾಸವಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದಲ್ಲಿ ದಲಿತರು,ಹಿಂದುಳಿದವರು, ಅಲ್ಪಸಂಖ್ಯಾತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದರು.
ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಆರ್.ಪ್ರಸನ್ನಕುಮಾರ್ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾನಂದಿನಿಗೌಡ, ಮುಖಂಡರಾದ ಅಶ್ವಿನ್, ಸುನಿಲ್, ಪ್ರಕಾಶ್‌ರಾಮನಾಯ್ಕ, ಶ್ರೀಧರ್, ಜಯಣ್ಣ, ಚಿದಾನಂದಮೂರ್ತಿ, ಪಾಂಡುರಂಗಪ್ಪ, ಮೊಹಿದ್ದೀನ್, ಲಕ್ಷ್ಮಣ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net