ಭಾನುವಾರ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಪ್ರವಾಸ

KN Rajanna
Published on

ಹಾಸನ: ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎನ್ ರಾಜಣ್ಣ ಅವರು ಜು.6ರ ಭಾನುವಾರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಭಾನುವಾರ ಬೆಳಗೆ 9 ಗಂಟೆಗೆ ಆಗಮಿಸಿ ಚನ್ನರಾಯಪಟ್ಟಣ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಹಾಸನ ಜಿಲ್ಲೆಯಲ್ಲಿ ವರದಿಯಾಗುತ್ತಿರುವ ಹೃದಯಘಾತದ ಪ್ರಕರಣಗಳ ಬಗ್ಗೆ ಚರ್ಚಿಸಲು ಡಿಎಚ್‌ಒ ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳ ಟಿಎಚ್‌ಒ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ನಂತರ 11 ಗಂಟೆಗೆ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ಗೂಳಿಹೊನ್ನೇನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ 3 ಗಂಟೆಗೆ ಚನ್ನರಾಯಪಟ್ಟಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net