ಭಾರತ ಜೋಡೋದಿಂದ ರಾಹುಲ್, ಸಿದ್ದರಾಮಯ್ಯ ಆರೋಗ್ಯ ಸುಧಾರಣೆ

Published on

ಹುಬ್ಬಳ್ಳಿ : ಭಾರತ ಜೋಡೋ ಯಾತ್ರೆಯಿಂದ ಕಾಂಗ್ರೆಸ್‌ಗೆ ಯಾವುದೇ ಲಾಭ ಇಲ್ಲ. ಆದರೆ, ಈ ಯಾತ್ರೆಯಿಂದ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.
ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅಪ್ರಯೋಜಕವೆಂದು ಬಿಂಬಿಸುವ ಅನಿವಾರ್ಯತೆ ಬಿಜೆಪಿಗೆ ಇಲ್ಲ. ಜನರೇ ಅವರನ್ನು ನಿಷ್ಪ ್ರಯೋಜಕವೆಂದು ತೀರ್ಮಾನಿಸಿದ್ದಾರೆ ಎಂದು ಟೀಕಿಸಿದರು.
ಪ.ಜಾತಿ, ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವ ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹವಾದದ್ದು. ಬಿಜೆಪಿ ದೀನ, ದಲಿತರ ಪಕ್ಷವೆಂದು ಮತ್ತೊಮ್ಮೆ ಸಾಬೀತಾಗಿದೆ. ಪಂಚಮಸಾಲಿ ಸೇರಿದಂತೆ ಇತರ ಸಮಾಜದವರು ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮೀಸಲಾತಿಯ ಭರವಸೆ ನೀಡಿದವರಿಗೆ ಮೀಸಲಾತಿ ಸೌಲಭ್ಯ ಸಿಗುತ್ತದೆ ಎಂದರು.
ದಲಿತರನ್ನು ಕಾಂಗ್ರೆಸ್ ಮತಬ್ಯಾಂಕ್ ಮಾಡಿಕೊಂಡಿತ್ತು. ಆ ಪಕ್ಷ ಹಿಂದುಳಿದವರ ಕಲ್ಯಾಣ ಮಾಡಲಿಲ್ಲ. ಹೀಗಾಗಿ, ದಲಿತರ ಸ್ಥಿತಿ ಹೀನಾಯವಾಯಿತು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net