ಭಾರತದ ಪರಂಪರೆ ಎತ್ತಿ ಹಿಡಿದ ಮಹಾಕಾವ್ಯ

00000
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಮಹರ್ಷಿ ವಾಲ್ಮೀಕಿ ಅವರ ಸಂದೇಶಗಳು ಮಹತ್ವದ ಪಾತ್ರವಹಿಸಲಿವೆ ಎಂದು
ಶಾಸಕ ಎನ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ತಾಲೂಕು ಕಚೇರಿ ಅವರಣದಲ್ಲಿ ಗುರುವಾರ ತಾಲೂಕು ಆಡಳಿತ, ಸಮಾಜಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಮಾಯಣದಂತಹ ಮೇರು ಕೃತಿ ರಚಿಸಿ ಭಾರತದ ಸಂಸ್ಕೃತಿ ಎತ್ತಿ ಹಿಡಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ರಾಮಾಯಣ ದೇಶ, ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ. ಮಾನವೀಯ ಗುಣ ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ಈ ಮಹಾಕಾವ್ಯದಲ್ಲಿ ಕಲಿಯಬಹುದು ಎಂದರು.
50 ಲಕ್ಷ ರೂ. ಅನುದಾನ: ವಾಲ್ಮೀಕಿ ಭವನಕ್ಕೆ ರಸ್ತೆ ಹಾಗೂ ಕಾಂಪೌಡ್ ವ್ಯವಸ್ಥೆ ಬಗ್ಗೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿಲಾಗಿದ್ದು, ಶೀಘ್ರವೇ ನಿರ್ಮಾಣ ಕಾಮಗಾರಿ ಮಾಡಲಾಗುವುದು. ಎಸ್‌ಟಿ ಕಾಲನಿಗಳ ಅಭಿವೃದ್ಧಿಗೆ ವಿಶೇಷವಾಗಿ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದು, ಹಂತಹಂತದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಪೂರ್ಣಿಮಸುಗ್ಗರಾಜು ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣ ದೇಶವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ಹಾಗೂ ಭಾರತೀಯರ ಧರ್ಮ ಸಂಸ್ಕೃತಿ, ಆಚಾರ ವಿಚಾರಗಳ ಅಭಿವ್ಯಕ್ತಿಯಾಗಿದೆ. ರಾಮಾಯಣ ಜಗತ್ತಿನ ಹಲವು ಭಾಷೆಗಳಿಗೆ ಅನುವಾದ ವಾಗಿರುವುದು ಹೆಮ್ಮೆಯ ಸಂಗತಿ ಎಂದರು. ನೆ.ಯೋ.ಪ್ರಾಧಿಕಾರ ಅಧ್ಯಕ್ಷ ನಾರಾಯಣ್‌ಗೌಡ, ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್, ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಬಿ.ಎನ್. ನರಸಿಂಹಮೂರ್ತಿ, ಕನ್ನಡ ಸಾಂಸ್ಕೃತಿಕ ರಂಗ ಅಧ್ಯಕ್ಷ ಡಿ.ಸಿದ್ಧರಾಜು, ಮುಖಂಡ ಎಂ.ಕೆ.ನಾಗರಾಜು, ಸಿ.ಎಂ.ಗೌಡ, ಚಿಕ್ಕಣ್ಣ, ಬಿನ್ನಮಂಗಲ ವೆಂಕಟೇಶ್, ಎನ್.ಎಸ್.ಮೂರ್ತಿ, ದೇಗನಹಳ್ಳಿ ನರಸಿಂಹಮೂರ್ತಿ, ಅನಿಲ್‌ಕುಮಾರ್, ದಿಲೀಪ್ ಕುಮಾರ್, ಸಿ.ಎಚ್.ಸಿದ್ದಯ್ಯ, ಆನಂದ್ ಮೌರ್ಯ ಶಿರಸ್ತೇದಾರ್ ರವೀಂದ್ರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net