ಭಾರತೀಯ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿ

26Rajesh19
Published on

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕಸ್ತೂರಿ ಕನ್ನಡ ಜನಪರ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ಎಂ.ನಾಗಬಸವಣ್ಣ ರಾಮಸಮುದ್ರ ಹೇಳಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಕಸ್ತೂರಿ ಕನ್ನಡ ಜನಪರ ಹೋರಾಟ ವೇದಿಕೆ ವತಿಯಿಂದ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸಂವಿಧಾನ ರಚಿಸಿದ್ದು, ಪರಿಪೂರ್ಣ ಸಂವಿಧಾನ ರಚನೆಗೆ ಅವರ ಕೊಡುಗೆ ಅಪಾರವಾಗಿದೆ ಎಂದರು.

ವೇದಿಕೆ ಜಿಲ್ಲಾ ಉಪಾಧ್ಯಕ್ಷ ಬಿ.ಎಂ.ಮುಕುಂದಮೂರ್ತಿ, ಮಹದೇವಶೆಟ್ಟಿ, ಕಾರ್ಯಾಧ್ಯಕ್ಷ ಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ಮಹದೇವಸ್ವಾಮಿ, ಮಹದೇವಸ್ವಾಮಿ ಬದನಗುಪ್ಪೆ, ಸಂಚಾಲಕ ಸೈಯದ್‌ಅಬ್ರಾರ್, ಮಹಮದ್‌ಅಬ್ಬಾಸ್, ಮಹಮ್ಮದ್ ಮುಹಿಬ್, ರೇವಣ್ಣ, ಬಂಗಾರಸ್ವಾಮಿ, ಸೈಯದ್ ಆಸಿಫ್, ಸಿದ್ದಪ್ಪ, ಶಿವಕುಮಾರ್, ಮಹದೇವಸ್ವಾಮಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net