ಭಾರತ್ ಜೋಡೋಗೆ ಮೊದಲ ವರ್ಷ- ಪ್ರಭಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ

dvg-bharata.jpg
Published on

ದಾವಣಗೆರೆ : ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ ವರ್ಷ ಕನ್ಯಾಕುಮಾರಿಯಿಂದ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು.

ನಗರದ ಅಮರ್ ಜವಾನ್ ವೀರಯೋಧರ ಸ್ಮಾರಕ ಉದ್ಯಾನ ಆವರಣದಲ್ಲಿ ಪಾದಯಾತ್ರೆ ಉದ್ಘಾಟನೆ ನೆರವೇರಿಸಿದ ಎಸ್ಸೆಸ್ ಕೇರ್ ಟ್ರಸ್ಟ್‌ನ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗಿಯಾದರು. ನಗರದ ಪ್ರಮುಖ ರಸ್ತೆಗಳ ಮೂಲಕ ಈ ಯಾತ್ರೆ ಅಂಬೇಡ್ಕರ್ ವೃತ್ತದಲ್ಲಿ ಅಂತ್ಯಗೊಂಡಿತು. ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್ ಪಾಟೀಲ್, ರೇವಣಸಿದ್ದಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್. ಮಲ್ಲಿಕಾರ್ಜುನ್, ಎ.ನಾಗರಾಜ್, ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯರಾದ ಚಮನ್‌ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕೆ.ಜಿ ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಸುಷ್ಮಾ ಪಾಟೀಲ್ ಹಾಗೂ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net