ಭಾರತ್ ಬಂದ್; ರೈತ ಸಂಘ ಬೆಂಬಲ

Sidramappa Anadoore
Published on

ಬೀದರ್: ಹೊಸ ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲಿಸಿ ಮಂಗಳವಾರ ನಗರದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘ (ಕೊಡಿಹಳ್ಳಿ ಚಂದ್ರಶೇಖರ ಬಣ)ದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ತಿಳಿಸಿದ್ದಾರೆ.

ನವ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ದೇಶಾದ್ಯಂತ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ 11.30ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ. ಎಲ್ಲ ವ್ಯಾಪಾರಸ್ಥರು ಸ್ವಯಂ ಆಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಸಂಘದ ಪದಾಧಿಕಾರಿಗಳು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net