ಭಾರಿ ಗಾತ್ರ ಹೆಬ್ಬಾವು ಸೆರೆ

Oplus_131072
Oplus_131072
Published on

ಯಳಂದೂರು: ತಾಲೂಕಿನ ದಾಸನಹುಂಡಿ ಗ್ರಾಮದ ರಾಜೇಶ್ ಎಂಬುವರ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವನ್ನು ಉರಗ ತಜ್ಞ ಸಂತೆಮರಹಳ್ಳಿಯ ಸ್ನೇಕ್ ಮಹೇಶ್ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.

ಜಮೀನಿನಲ್ಲಿ ಬಾಳೆ ಕಟಾವು ಮಾಡುತ್ತಿದ್ದ ಸಂದರ್ಭ ಮಲಗಿದ್ದ ಹೆಬ್ಬಾವಿನ ಮೇಲೆ ಗೊತ್ತಿಲ್ಲದೆ ಕೆಲಸಗಾರರು ತುಳಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕೂಡಲೇ ತೋಟದ ಮಾಲೀಕ ರಾಜೇಶ್ ಅವರಿಗೆ ವಿಷಯ ಮುಟ್ಟಿಸಿದ್ದಾರೆ. ಉರಗ ತಜ್ಞ ಸಂತೆಮರಹಳ್ಳಿಯ ಸ್ನೇಕ್ ಮಹೇಶ್ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಹಾವನ್ನು ಸುರಕ್ಷಿತವಾಗಿ ಹಿಡಿದು ಬಿಆರ್‌ಟಿ ಹುಲಿ ರಕ್ಷಿತ ಅರಣ್ಯಕ್ಕೆ ಬಿಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net