ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿ

26 ckm 2
ಚಿಕ್ಕಮಗಳೂರು ಜಿಪಂ ಸಭಾಂಗಣದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜೇಂದ್ರ ಕುಮಾರ್ ಕಠಾರಿಯಾ, ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಮೀನಾ ನಾಗರಾಜ್, ಎಚ್.ಎಸ್.ಕೀರ್ತನಾ, ವಿಕ್ರಮ ಅಮಟೆ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಮುಂದಿನ ಎರಡು ತಿಂಗಳು ಭಾರಿ ಮಳೆಯಾಗುವ ಸಾಧ್ಯತೆ ಇದ್ದರಿಂದ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಹೈ ಅಲರ್ಟ್ ಆಗಿರಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣಲ್ಲಿ ಗುರುವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪದೇ ಪದೇ ಭೂ ಕುಸಿತ ಉಂಟಾಗುವ ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕು. ಒಂದು ವೇಳೆ ಜನ ಕಾಳಜಿ ಕೇಂದ್ರಗಳಿಗೆ ಬರಲು ಒಪ್ಪದಿದ್ದಲ್ಲಿ ಗ್ರಾಪಂಗಳಿAದ ತಾತ್ಕಾಲಿಕವಾಗಿ ಅವರಿಗೆ ಬಾಡಿಗೆ ಮನೆ ವ್ಯವಸ್ಥೆ ಮಾಡಬೇಕು. ಇದಲ್ಲದೆ ಅಂಗನವಾಡಿ ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ಫಿಟ್‌ನೆಸ್ ಪರಿಶೀಲನೆ ನಡೆಸಬೇಕು ಎಂದರು.

ಮುAಗಾರು ಮಳೆಯ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಭೂ ಕುಸಿತ ಉಂಟಾಗುವ ಸ್ಥಳಗಳಿಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಂಡ ಭೇಟಿ ನೀಡಿತ್ತು. ಇದರ ಜತೆಗೆ ಹೊಸದಾಗಿ ಕೆಲವೆಡೆ ಭೂ ಕುಸಿತ ಉಂಟಾಗಿದೆ. ಅಂತಹ ಪ್ರದೇಶಗಳನ್ನು ಗುರುತು ಮಾಡಲಾಗಿದೆ. ರಾಷ್ಟಿçÃಯ ಹೆದ್ದಾರಿ, ಪಂಚಾಯತ್ ರಾಜ್ ಇಲಾಖೆಗೆ ಒಳಪಡುವ ರಸ್ತೆಗಳು ಹಾಗೂ ಸಂಪರ್ಕ ರಸ್ತೆಗಳ ಮಾಹಿತಿಯನ್ನು ಕ್ರೋಡಿಕರಿಸಿ ಮೊದಲ ಆದ್ಯತೆ ಮೇಲೆ ರಾಷ್ಟಿçÃಯ ಹೆದ್ದಾರಿ ರಸ್ತೆಗಳಲ್ಲಿ ಭೂ ಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಎಲ್ಲಲ್ಲಿ ರಸ್ತೆ ಹಾಳಾಗಿದೆ ಎಂಬ ವರದಿ ಸಿದ್ಧಪಡಿಸಿ ಕಳುಹಿಸಿಕೊಟ್ಟರೆ ದುರಸ್ತಿ ಕಾಮಗಾರಿಗೆ ಒಂದು ತಿಂಗಳೊಳಗೆ ಮಂಜೂರಾತಿ ನೀಡಲಾಗುವುದು. ಬಳಿಕ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಬೇಕು. ಹಣ ಬಿಡುಗಡೆಯಾದ ನಂತರ ಕಾಮಗಾರಿಯನ್ನು ಆರಂಭಿಸಬೇಕು. ಇದಕ್ಕೆ ರಾಜ್ಯದ ೬ ಜಿಲ್ಲೆಗಳಿಗೆ ೪೦೦ ಕೋಟಿ ರುಪಾಯಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಪತ್ತು ನಿರ್ವಹಣೆಗೆ ಕೊಡುತ್ತಿರುವ ಹಣವನ್ನು ಅದೇ ವರ್ಷದಲ್ಲೇ ಬಳಕೆ ಮಾಡಬೇಕು. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ನಿಮಯವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ರಸ್ತೆಗಳ ಗುಂಡಿ ಮುಚ್ಚಲು ಕೊಟ್ಟ ಹಣ ಅದೇ ಉz್ದೆÃಶಕ್ಕೆ ಬಳಕೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಶಾಸಕರಾದ ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಮತ್ತಿತರರಿದ್ದರು.

ಪೋಡಿಗೆ ಹಿನ್ನಡೆ

ಜಿಲ್ಲೆಯಲ್ಲಿ ಹಲವು ಪೋಡಿ ಪ್ರಕರಣಗಳು ನೆನಗುದಿಗೆ ಬಿದ್ದಿವೆ. ಅವುಗಳನ್ನು ಇತ್ಯರ್ಥಪಡಿಸಲು ಆಗುತ್ತಿಲ್ಲ ಎಂಬ ವಿಷಯ ಚರ್ಚೆಗೆ ಬಂದಾಗ ಚಿಕ್ಕಮಗಳೂರು ಡಿಎಫ್‌ಓ ರಮೇಶ್‌ಬಾಬು ಅವರು ಮಾತನಾಡಿ, ಮೀಸಲು ಅರಣ್ಯದಿಂದ ೧೦೦ ಮೀಟರ್ ವ್ಯಾಪ್ತಿಯೊಳಗೆ ಕಂದಾಯ ಭೂಮಿ ಇದ್ದರೂ ಪೋಡಿಗೆ ಅವಕಾಶ ಇರುವುದಿಲ್ಲ. ಒಂದು ಎಕರೆ ಪ್ರದೇಶದಲ್ಲಿ ೧೦ಕ್ಕಿಂತ ಹೆಚ್ಚು ಮರಗಳು ಇದ್ದರೆ ಆ ಜಮೀನು ಕೂಡ ಪೋಡಿ ಮಾಡಲು ಅವಕಾಶ ಇಲ್ಲ ಎಂದು ಹೇಳುತ್ತಿದ್ದಂತೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಂಡೆ ನಕ್ಷೆಯನ್ನು ಸಿದ್ಧಪಡಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಸರ್ಕಾರದಿಂದ ಮಂಜೂರಾಗಿರುವ ಜಮೀನು ಹಲವು ಮಂದಿ ಸಾಗುವಳಿ ಮಾಡುತ್ತಿಲ್ಲ. ಅಂತಹ ಜಮೀನುಗಳನ್ನು ಪತ್ತೆ ಹಚ್ಚಿ ಸಾರ್ವಜನಿಕ ಉz್ದÉÃಶಕ್ಕೆ ಬಳಕೆ ಮಾಡಲು ಮೀಸಲಿಡಬೇಕು ಎಂದರು. ಇದಕ್ಕೆ ಸಚಿವರು ಒಪ್ಪಿಗೆ ಸೂಚಿಸಿದರು.

ಅಜ್ಜಂಪುರ ಪಟ್ಟಣದ ಸಮೀಪದಲ್ಲಿ ವ್ಯಕ್ತಿಯೋರ್ವರು ೪ ಎಕರೆ ಬಿ ಖರಾಬ್ ಜಾಗವನ್ನು ಸೇರಿಕೊಂಡು ಲೇಔಟ್ ಮಾಡಿ ಸೈಟ್‌ಗಳನ್ನು ಮಾರಾಟ ಮಾಡಿದ್ದಾರೆ. ಸರ್ಕಾರಿ ಜಾಗವನ್ನು ಪೋಡ್ ಮಾಡಿ ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ್ ಸಭೆಯ ಗಮನಕ್ಕೆ ತಂದಾಗ, ಭೂ ಪರಿವರ್ತನೆ ರದ್ದುಪಡಿಸಿ, ಖರಾಬ್ ಜಾಗವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.

ಹಲವು ವರ್ಷಗಳ ಹಿಂದೆ ಸರ್ಕಾರ ಭೂಹೀನರಿಗೆ ಜಮೀನು ಮಂಜೂರು ಮಾಡಿದೆ. ಕಾಲ ಕ್ರಮೇಣ ಅದು ಪೋಡ್ ಆಗಿಲ್ಲ. ಇದರಿಂದ ಬಹಳಷ್ಟು ಜನರಿಗೆ ತೊಂದರೆಯಾಗಿದೆ. ಕಷ್ಟ ಕಾಲದಲ್ಲಿ ಜಮೀನು ಮಾರಾಟ ಮಾಡಲು ಆಗುತ್ತಿಲ್ಲ. ಹಾಗಾಗಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಪೋಡ್ ಮಾಡಬೇಕು ಎಂದು ಹೇಳಿದರು.

ಕಂದಾಯ ಗ್ರಾಮ ಗುರುತಿಗೆ ಹಿನ್ನಡೆ

ಮಲೆನಾಡಿನ ತಾಲೂಕುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಂದಾಯ ಗ್ರಾಮಗಳ ಗುರುತಿಸುವಿಕೆ ಕೆಲಸ ಆಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರ ಹಾಕಿದರು.

ಬಡವರ ಕೆಲಸ ಮಾಡಲು ನಿಮಗೆ ಇಷ್ಟ ಇಲ್ಲ. ಹಾಗಾಗಿ ಕಂದಾಯ ಗ್ರಾಮಗಳ ಗುರುತಿಸುವ ಕೆಲಸ ಸಕಾಲದಲ್ಲಿ ನಿಮ್ಮಿಂದ ಆಗಿಲ್ಲ ಎಂದು ತಹಸೀಲ್ದಾರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

ಕೆಲವು ಸರ್ವೆ ನಂಬರ್‌ಗಳು ಸೊಪ್ಪಿನಬೆಟ್ಟ, ಅರಣ್ಯ ವ್ಯಾಪ್ತಿಯಲ್ಲಿ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಶೃಂಗೇರಿ ತಹಸೀಲ್ದಾರ್ ಅನೂಪ್ ಹೇಳಿದರು.

ಇ- ಆಫೀಸ್ ಕಡ್ಡಾಯವಾಗಿ ಮಾಡಲೇಬೇಕು. ಅದ್ದರಿಂದ ಎಲ್ಲ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಅಫ್ ಲೋಡ್ ಮಾಡಬೇಕು ಎಂದು ಹೇಳಿದ ಸಚಿವರು, ಮೂಡಿಗೆರೆ ತಾಲೂಕು ಕಚೇರಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಆಗಿಲ್ಲದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಇದೇ ಧೋರಣೆ ಮುಂದುವರೆದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಂಟಿ ಸರ್ವೇ ಬಳಿಕ ಪ್ಲಾಂಟೇಶನ್ ಭೂಮಿ ಗುತ್ತಿಗೆ ಅರ್ಜಿ ವಿಲೇವಾರಿ

ಪ್ಲಾಂಟೇಶನ್ ಭೂಮಿಯನ್ನು ಗುತ್ತಿಗೆಗೆ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ಜಂಟಿ ಸರ್ವೇ ಪೂರ್ಣಗೊಂಡು ಅರಣ್ಯ ಮತ್ತು ಕಂದಾಯ ಭೂಮಿಯ ನಿಖರ ಮಾಹಿತಿ ಲಭ್ಯವಾದ ಬಳಿಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಲವು ದಿನಗಳಿಂದ ಜಂಟಿ ಸರ್ವೇ ಆಗದೆ ಬಾಕಿ ಉಳಿದಿದೆ. ಇದೀಗ ಜಂಟಿ ಸರ್ವೇ ಕೈಗೊಳ್ಳಲು ಅರಣ್ಯ ಇಲಾಖೆಯೊಂದಿಗೆ ಸೇರಿ ನಿಯಮಾವಳಿಗಳನ್ನು ರೂಪಿಸಿ, ಸುತ್ತೋಲೆಗಳನ್ನು ಹೊರಡಿಸಿ, ಹಿಂದಿನಿAದಲೂ ಉಳಿದಿದ್ದ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಜಂಟಿ ಸರ್ವೇಯನ್ನು ಕಾರ್ಯ ರೂಪಕ್ಕೆ ತಂದಿರುವುದಾಗಿ ತಿಳಿಸಿದರು.

ಜಂಟಿ ಸರ್ವೇ ಆಗದೆ ಅರ್ಜಿ ವಿಲೇವಾರಿ ಮಾಡಲು ಸಾಧ್ಯವಿಲ್ಲ. ಅರಣ್ಯ ಮತ್ತು ಕಂದಾಯ ಜಮೀನಿನ ನಿಖರತೆ ತಿಳಿಯದಿದ್ದಲ್ಲಿ ಅರ್ಜಿ ವಿಲೇವಾರಿ ಪ್ರಕ್ರಿಯೆ ಸಾಧ್ಯವಾಗದು. ಹಿಂದೆ ಆಗಿರುವಂತೆ ಕಂದಾಯ ಜಮೀನು ಎಂದು ಅರಣ್ಯ ಭೂಮಿಯನ್ನು ಮಂಜೂರು ಮಾಡಿರುವಂತಹ ತಪ್ಪುಗಳು ಪುನರಾವರ್ತನೆಯಾಗಬಹುದು. ಹೀಗಾಗಿ ಜಂಟಿ ಸರ್ವೇ ಪೂರ್ಣಗೊಂಡ ಬಳಿಕವಷ್ಟೇ ಪ್ಲಾಂಟೇಶನ್ ಭೂಮಿ ಗುತ್ತಿಗೆಗೆ ನೀಡುವ ಕುರಿತ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ. ಎರಡು ವರ್ಷಗಳಲ್ಲಿ ಸಾಕಷ್ಟು ಕಾರ್ಯಗಳು ನಡೆದಿದ್ದು, ಇನ್ನೂ ಸಾಕಷ್ಟು ಕೆಲಸಗಳು ಆಗದೆ ಬಾಕಿ ಉಳಿದಿವೆ. ಹಿಂದೆ ಭೂಮಿ ಮಂಜೂರಾದ ಪ್ರಕರಣಗಳಲ್ಲಿ ಕಾಲ ಕಾಲಕ್ಕೆ ದಾಖಲಾತಿಗಳನ್ನು ನೀಡುವ ಕಾರ್ಯ ನಡೆದಿದ್ದಲ್ಲಿ ಇಷ್ಟೊಂದು ಸಮಸ್ಯೆಯಾಗುತ್ತಿರಲಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net