ಭಾರಿ ಮಳೆಗೆ ನೆಲಕ್ಕುರುಳಿದ ಅಡಕೆ ಗಿಡ

26-hvr-11
Published on

ಹಾವೇರಿ: ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಹಾಗೂ ಶುಕ್ರವಾರ ಸಂಜೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದ ಹಲವು ಕೆರೆಕಟ್ಟೆಗಳಿಗೆ ನೀರು ಹರಿದು ಬಂದರೆ, ಕೆಲವೆಡೆ ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ.

ಮಳೆಯಿಂದ ಹತ್ತಿ, ಮೆಕ್ಕೆಜೋಳ, ಸೋಯಾಬೀನ್ ಸೇರಿ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿರುವ ರೈತರಿಗೆ ಅನುಕೂಲವಾಗಿದೆ. ಜಿಲ್ಲೆಯ ರಾಣೆಬೆನ್ನೂರ, ಹಿರೇಕೆರೂರ, ರಟ್ಟಿಹಳ್ಳಿ, ಹಾವೇರಿ, ಬ್ಯಾಡಗಿ ಭಾಗದಲ್ಲಿ ಗುರುವಾರ ತಡರಾತ್ರಿ ಸುರಿದ ಮಳೆಗೆ ಅಪಾರ ಪ್ರಮಾಣದಲ್ಲಿ ಬಾಳೆ, ಅಡಕೆ, ಮೆಣಸಿನಕಾಯಿ ಸೇರಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.

ಹಾವೇರಿ ತಾಲೂಕು ಬಸಾಪುರ ಪ್ರಶಾಂತ ಸುಭಾಸ ಚಾವಡಿ ಅವರಿಗೆ ಸೇರಿದ 6 ಎಕರೆ ಬಾಳೆ ಹಾಗೂ ಅಡಕೆ ತೋಟಕ್ಕೆ ಮಳೆಯ ನೀರು ನುಗ್ಗಿ ಹಾನಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net