ಭಾರಿ ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು

20manju2
Published on

ಬೆಳಗಾವಿ: ಮಹಾನಗರ ಸೇರಿ ಜಿಲ್ಲಾದ್ಯಂತ ವಿವಿಧೆಡೆ ಮಂಗಳವಾರ ನಾಲ್ಕು ಗಂಟೆಗಳಿಗೂ ಅಧಿಕ ಕಾಲ ಗುಡುಗು, ಸಿಡಿಲು ಸಮೇತ ಗಾಳಿ ಮಳೆ ಸುರಿದು ಪರಿಣಾಮ 20ಕ್ಕೂ ಹೆಚ್ಚು ಮರ, ವಿದ್ಯುತ್ ಕಂಬಗಳು ನೆಲಕ್ಕುರುಳಿ ಸಾಕಷ್ಟು ಸಮಸ್ಯೆ ಸೃಷ್ಟಿಸಿದ್ದು, ಅಲ್ಲದೇ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಉಂಟು ಮಾಡಿತು.

ಬೆಳಗಾವಿ ಮಹಾನಗರ, ಗ್ರಾಮೀಣ, ಸವದತ್ತಿ, ಬೈಲಹೊಂಗಲ, ರಾಮದುರ್ಗ, ಮೂಡಲಗಿ, ಗೋಕಾಕ, ಕಿತ್ತೂರು, ಖಾನಾಪುರ, ಹುಕ್ಕೇರಿ, ಚಿಕ್ಕೋಡಿ ಸೇರಿ ವಿವಿಧ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಗಾಳಿ ಸಹಿತ ಭಾರಿ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿದೆ. ನಗರ, ಗ್ರಾಮದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಂಬ ಮತ್ತು ತಂತಿ ಬಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಅಲ್ಲಲ್ಲಿ ಮನೆಗಳ ಛಾವಣಿ ಹಾರಿ ಹೋಗಿವೆ. ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಚರಂಡಿ, ನಾಲಾ ಸ್ವಚ್ಛಗೊಳಿಸದಿರುವ ಹಿನ್ನೆಲೆಯಲ್ಲಿ ಮಳೆ ನೀರು ಸರಾಗವಾಗಿ ಚರಂಡಿಗಳಲ್ಲಿ ಹರಿಯದೇ ರಸ್ತೆ ಮೇಲೆ ಹರಿಯಿತು. ಇದರಿಂದ ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net