ಭಾರಿ ಮಳೆಗೆ ಹಲವು ಬಡಾವಣೆಗಳು ಜಲಾವೃತ

04arsph3ep
Published on

ಅರಸೀಕೆರೆ: ತಾಲೂಕಿನ ಜಾವಗಲ್ ಗ್ರಾಮದಲ್ಲಿ ಸೋಮವಾರ ಸಂಜೆ ಸುರಿದ ಮಳೆ ಭಾರಿ ಆವಾಂತರ ಸೃಷ್ಟಿಸಿದ್ದು, ಸ್ಥಳೀಯರಲ್ಲಿ ಕೆಲ ಕಾಲ ಅತಂಕ ಸೃಷ್ಟಿಸಿತ್ತು. ಜನತಾ ಬಡಾವಣೆ, ಸಂತೆ ಮೈದಾನ, ಖಲದರ್‌ನಗರ, ಪೊಲೀಸ್ ಠಾಣೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಳಗೊಂಡಂತೆ ಹಲವು ಅಂಗಡಿ-ಮುಂಗಟ್ಟು, ಮನೆಗಳಿಗೆ ದಿಢೀರ್ ನೀರು ನುಗ್ಗಿದ್ದರಿಂದ ಜನರು ಅಗತ್ಯ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಗಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ಗ್ರಾ.ಪಂ.ಕಾರ್ಯದರ್ಶಿ ನಂದಿನಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳಚರಂಡಿ ವ್ಯವಸ್ಥೆಯಿಲ್ಲದ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net