ಭಾವನೆಗಳಲ್ಲ ಬದುಕಿಗಾಗಿ ರಾಜ್ಯ ಸರ್ಕಾರ

DSC_9315
Published on

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ. ಬಿಜೆಪಿಗರಿಗೆ ೨೦೦ ಯೂನಿಟ್ ಉಚಿತ ವಿದ್ಯುತ್ ನೀಡಲು ಆಗಲಿಲ್ಲ. ಕಾಂಗ್ರೆಸ್ ಸರ್ಕಾರ ಭಾವನೆಗಳಲ್ಲ ಬದುಕಿಗಾಗಿ ಕೆಲಸ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಜೀವಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಉದ್ಘಾಟನೆ, ವಿವಿಧ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿ, ದೇವರು ಇರಬೇಕು. ಆದರೆ ಮೊದಲು ಹೊಟ್ಟೆ ತುಂಬಬೇಕು. ಅದಕ್ಕಾಗಿ ಉಚಿತ ಕರೆಂಟ್, ೧೦ ಕೆ.ಜಿ. ಅಕ್ಕಿ, ಯುವ ನಿಧಿ, ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಜೀವ್ ಗಾಂಧಿ, ದೇವರಾಜು ಅರಸು ಇಬ್ಬರೂ ಶೋಷಿತರು, ಬಡವರ ಬಗ್ಗೆ ಕಾಳಜಿ, ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದರು. ಜೀತ ಪದ್ಧತಿ, ಮಲಹೊರುವ ಪದ್ಧತಿಗೆ ಅರಸು ಮುಕ್ತಿ ನೀಡಿದ್ದರು. ಗ್ರಾಮೀಣ ಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ, ರಾಷ್ಟçದಲ್ಲಿ ಹಲವು ನಾಯಕರನ್ನು ಅರು ಬೆಳೆಸಿದ್ದರು.

ರಾಜೀವ್ ಗಾಂಧಿ ದೂರದೃಷ್ಟಿಯಿಂದ ರಾಜ್ಯ ಮಾಹಿತಿ ತಂತ್ರಜ್ನಾನ ಕ್ಷೇತ್ರದಲ್ಲಿ ಕ್ರಾಂತಿಯಾಗಿದ್ದು, ರಾಜ್ಯದಿಂದ ನಾಲ್ಕು ಲಕ್ಷ ಐಟಿ ಸರ್ವಿಸಸ್ ರಫ್ತಾಗಿದ್ದು, ವಿಶ್ವದ ನಾಲ್ಕನೇ ಅತಿದೊಡ್ಡ ಕ್ಲಸ್ಟರ್ ಆಗಿ ಹೊರಹೊಮ್ಮಿದೆ. ಸಮೃದ್ದ, ಸಶಕ್ತ ಹಾಗೂ ಪ್ರಬುದ್ಧ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಿಸಲು ಕೈಜೋಡಿಸಿ ಎಂದು ಮನವಿ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಮಾತನಾಡಿ, ರಾಜೀವ್‌ಗಾಂಧಿ ಆಯಾ ರಾಮ್ ಗಯಾರಾಮ್ ಸಂಸ್ಕೃತಿಗೆ ಕೊನೆ ಹಾಡಲು ಪಕ್ಷಾಂತರ ನಿಷೇಧ ಕಾಯ್ದೆ ತಂದರು. ಅಧಿಕಾರ ವಿಕೇಂದ್ರೀಕರಣಕ್ಕೆ ಬಲ ತುಂಬಿದರು. ಸ್ವಸಹಾಯ ಸಂಘ ಹೆಚ್ಚಿಸಲು ಪ್ರಸ್ತುತ ಶ್ರಮಿಸಲಾಗುತ್ತಿದೆ ಎಂದರು.
ಶಾಸಕ ಅಲ್ಲಮಪ್ರಭು ಮಾತನಾಡಿ, ದೇವರಾಜ ಅರಸು, ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವರ ಶ್ರಮದಿಂದ ಮುಂದಿನ ಪೀಳಿಗೆಗೆ ಅನುಕೂಲ ಆಗುವ ಯೋಜನೆ ಜಾರಿಗೆ ತರಲಾಗಿದೆ. ಇಂದಿರಾ ಗಾಂಧಿ ಅವರ ೨೦ ಅಂಶಗಳ ಯೋಜನೆ, ಅರಸು ಅವರ ಉಳುವವನೇ ಭೂ ಒಡೆಯ ಯೋಜನೆಗಳು ಸಮಾನತೆ ಕಲ್ಪಿಸಿದರು ಎಂದರು.
ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಉಮಾಮಹಾದೇವನ್ ಪ್ರಾಸ್ತಾವಿಕ ಮಾತನಾಡಿ, ಕರ್ನಾಟಕದಲ್ಲಿ ಪಂಚಾಯತ್ ರಾಜ್ ಕಾರ್ಯಗಳು ಸರಳವಾಗಿಸಲು ಪಂಚತಂತ್ರ -೨ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಯೋಜನೆ ಫಲಾನುಭವಿಗಳಿಗೆ ಸಾಮಗ್ರಿಗಳನ್ನು, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್,ಶಾಸಕರಾದ, ಕನೀಜ್ ಫಾತೀಮಾ, ಎಂ.ವೈ.ಪಾಟೀಲ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ, ವಿ.ವಸಂತಕುಮಾರ, ಚಂದ್ರಶೇಖರ ಪಾಟೀಲ್, ಜಗದೇವ ಗುತ್ತೇದಾರ್, ಕೂಡಾ ಅಧ್ಯಕ್ಷ ಮಜರ್ ಆಲಂ ಖಾನ್, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಂದರೇಶ ಬಾಬು, ಐಜಿ ಅಜಯ ಹಿಲೋರಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ಇತರರಿದ್ದರು. ಜಿಪಂ ಸಿಇಒ ಭಂವರ್‌ಸಿAಗ್ ಮೀನಾ ಸ್ವಾಗತಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮ್ ಪಟೇಲ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net