ಭಾಷಾಭಿಮಾನ ಉಳಿದು ಬೆಳೆಯಲಿ

ಮಲೆಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಎ.ಈ ರಘು, ಚಂದ್ರುಶೇಖರ್, ಸೆಲ್ವ ಗಣಪತಿ, ರವೀಂದ್ರ, ಮಹೇಶ್‌ಕುಮಾರ್ ಇತರರು ಇದ್ದರು.
ಮಲೆಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಎ.ಈ ರಘು, ಚಂದ್ರುಶೇಖರ್, ಸೆಲ್ವ ಗಣಪತಿ, ರವೀಂದ್ರ, ಮಹೇಶ್‌ಕುಮಾರ್ ಇತರರು ಇದ್ದರು.
Published on

ಹನೂರು: ಪ್ರಸ್ತುತ ದಿನಗಳಲ್ಲಿ ಕನ್ನಡ ನಾಡು, ನುಡಿ ಹಾಗೂ ಜಲದ ಬಗ್ಗೆ ಹೆಚ್ಚಿನ ಅಭಿಮಾನ ಹೊಂದುವುದರ ಮೂಲಕ ಉಳಿಸಿ, ಬೆಳೆಸುವ ಕೆಲಸವಾಗಬೇಕಿದೆ ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಎ.ಈ ರಘು ತಿಳಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ಧ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, 2.5 ಸಾವಿರ ವರ್ಷಗಳ ಪ್ರಾಚೀನ ಇತಿಹಾಸವಿದೆ. ಇತರೆ ಭಾಷೆಗಳಿಗೆ ಹೋಲಿಸಿದರೆ ಭಾಷೆಯು ಉತ್ಕೃಷ್ಟತೆಯನ್ನು ಹೊಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಸಮಾಜದಲ್ಲಿ ದೊಡ್ಡಸ್ಥಿಕೆಯನ್ನು ಬಿಂಬಿಸಿಕೊಳ್ಳಲು ಇಂಗ್ಲೀಷ್ ಭಾಷೆಯ ಮೊರೆ ಹೋಗುತ್ತಿದ್ದಾರೆ. ಇದರಿಂದ ಭಾಷೆಯ ಮೇಲೆ ಪೆಟ್ಟು ಬಿದ್ದಂತಾಗಿದೆ. ಹಾಗಾಗಿ ಭಾಷೆಯನ್ನು ಉಳಿಸಿ ಬೆಳೆಸಲು ಯೋಚಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ನಾಡು, ಜಲ ಹಾಗೂ ಸಂಸ್ಕೃತಿ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರುಶೇಖರ್, ಇಂಜಿನಿಯರ್ ಸೆಲ್ವ ಗಣಪತಿ, ರವೀಂದ್ರ, ಮಹೇಶ್‌ಕುಮಾರ್, ಜನಾರ್ಧನ್, ಮಹದೇವಸ್ವಾಮಿ, ಮಲ್ಲಿಕಾರ್ಜುನ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net