ಭಾಷಾಭಿಮಾನದ ಜತೆಗೆ ಮಾನವೀಯತೆಯೂ ಇರಲಿ

21 mlv 4
Published on

ಮಳವಳ್ಳಿ: ಈ ನಾಡಿನಲ್ಲಿ ಹುಟ್ಟಿ ಬದುಕನ್ನು ಕಟ್ಟಿಕೊಂಡಿರುವ ಪ್ರತಿಯೊಬ್ಬ ಪ್ರಜೆಯೂ ಭಾಷಾಭಿಮಾನದ ಜತೆಗೆ ಯಾವುದೇ ವ್ಯಕ್ತಿ ಎಂತಹ ಹುದ್ದೆಯಲ್ಲಿದ್ದರೂ ಮನುಷ್ಯತ್ವ, ಮಾನವೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಕೆ. ಅನ್ನದಾನಿ ತಿಳಿಸಿದರು.

ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರ ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ 67ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಪಾರಿವಾಳ ಹಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಕನ್ನಡ ಭಾಷೆಗೆ ಭರವಿಲ್ಲ.ಆದರೆ, ನೀರಿನ ತೊಂದರೆಯನ್ನು ಎದುರಿಸುತ್ತಿದ್ದೇವೆ. ಅನ್ಯ ಭಾಷಿಗರು ನಮ್ಮ ನಾಡಿನಲ್ಲಿ ಹುಟ್ಟಿಬೆಳೆದಿದ್ದರೂ ನಮ್ಮ ಭಾಷೆ ಕಲಿಯದೇ ಜೀವನ ನಡೆಸುತ್ತಿರುವುದು ಬೇಸರದ ಸಂಗತಿ ಎಂದರು.

ತಹಸೀಲ್ದಾರ್ ಎಂ.ವಿಜಿಯಣ್ಣ ಮಾತನಾಡಿದರು. ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಬಿಇಒ ನಾಗರಾಜು, ಜೆಡಿಎಸ್ ತಾಲೂಕು ಅಧ್ಯಕ್ಷ ವಿ.ಎಂ. ವಿಶ್ವನಾಥ್, ಯುವ ಘಟಕದ ಅಧ್ಯಕ್ಷ ಚಂದಳ್ಳಿ ಶ್ರೀಧರ್, ಹಿಂದುಳಿದ ವರ್ಗಗಳ ಅಧ್ಯಕ್ಷ ಸಿದ್ದಾಚಾರಿ, ಕಸಾಪ ಅಧ್ಯಕ್ಷ ಚೇತನ್ ಕುಮಾರ್, ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗರಾಜು, ಹಿರಿಯ ಶ್ರೇಣಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದೇಗೌಡ, ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ದೇವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net