ಭುಗತಗಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

29
Published on

ಮೈಸೂರು: ರೈತರು ವ್ಯವಸಾಯದ ಜತೆಗೆ ಹೈನುಗಾರಿಕೆಯನ್ನು ಉಪಕಸುಬನ್ನಾಗಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು.
ಮೈಸೂರು ತಾಲೂಕಿನ ಭುಗತಗಳ್ಳಿಯಲ್ಲಿ ಶನಿವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿಯೇ ಮೈಸೂರು ಉತ್ತಮ ಸ್ಥಾನದಲ್ಲಿದೆ. 2013 ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ನೀಡಿದ್ದರು. ಈ ಬಾರಿ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ರೈತರು ಹಾಗೂ ಮಹಿಳೆಯರ ಪರ ಇದೆ ಎಂಬುದನ್ನು ಸಾಬೀತು ಮಾಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದರು.
ಮೈಮುಲ್‌ನ ವ್ಯವಸ್ಥಾಪಕ ನಿರ್ದೇಶಕ ವಿಜಯ್‌ಕುಮಾರ್, ನಿರ್ದೇಶಕರಾದ ಬಿ.ಗುರುಸ್ವಾಮಿ, ಉಮಾಶಂಕರ್, ಓಂಪ್ರಕಾಶ್, ಡೇರಿ ಅಧ್ಯಕ್ಷೆ ಮಂಜುಳಾ, ಮುಖಂಡರಾದ ಮಣಿ, ವರುಣಾ ಮಹೇಶ್, ಕೋಟೆಹುಂಡಿ ಮಹದೇವು, ಜವರಪ್ಪ, ಹಿನಕಲ್ ಉದಯ್, ನಾಡನಹಳ್ಳಿ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ದೇಗೌಡ, ದುದ್ದಗೆರೆ ಮಹದೇವ್, ದೊಡ್ಡಹುಂಡಿ ಸೋಮಣ್ಣ, ಬಾಬು, ಎಂ.ಟಿ. ರವಿಕುಮಾರ್, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಆಪ್ತ ಸಹಾಯಕರಾದ ಪ್ರದೀಪ್‌ಕುಮಾರ್, ನಾಗರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net