ಭುವನೇಶ್ವರಿ ರಥಯಾತ್ರೆಗೆ ಅದ್ದೂರಿ ಸ್ವಾಗತ

BDVT WEEEEEB
Published on

ಭದ್ರಾವತಿ: ಹಾವೇರಿಯಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಶನಿವಾರ ನಗರಕ್ಕೆ ಆಗಮಿಸಿತು. ತರೀಕೆರೆ ರಸ್ತೆಯ ಗಾಂಧಿ ವೃತ್ತದ ಬಳಿ ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಕನ್ನಡಪರ ಸಂಘ ಸಂಸ್ಥೆಗಳ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ರಥಯಾತ್ರೆಗೆ ಭವ್ಯ ಸ್ವಾಗತ ಕೋರಿ ಕನ್ನಡಾಂಬೆಗೆ ಪುಷ್ಪಮಾಲೆ ಹಾಕುವ ಮೂಲಕ ಬರಮಾಡಿಕೊಂಡರು. ನಂತರ ರಥಯಾತ್ರೆಯು ಧ್ವನಿವರ್ಧಕ, ಜಾನಪದ ಕಲಾ ತಂಡಗಳು, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು, ಶಾಲಾ ಮಕ್ಕಳ ಮೆರವಣಿಗೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕನಕಮಂಟಪ ಮೈದಾನ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net