

ಚಿಕ್ಕಮಗಳೂರು: ಕಡೂರು ಮತ್ತು ಮೂಡಿಗೆರೆ ತಾಲೂಕಿನ ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿ, ಸಿಬ್ಬಂದಿಯನ್ನು ಸೇವೆಯಿಂದಲೇ ವಜಾ ಮಾಡಬೇಕು. ಇಲ್ಲದಿದ್ದರೆ ರೈತ ಸಂಘ ಪ್ರಬಲ ಹೋರಾಟ ರೂಪಿಸಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಎಚ್ಚರಿಕೆ ನೀಡಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡೂ ತಾಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣಗಳನ್ನು ತನಿಖೆ ಮಾಡಲು ಗಣಪತಿ ಶಾಸ್ತಿç ನೇತೃತ್ವದಲ್ಲಿ ಸರ್ಕಾರ ಸಮಿತಿ ರಚನೆ ಮಾಡಿತ್ತು. ಆ ಸಮಿತಿ ಈಗಾಗಲೇ ವರದಿಯನ್ನು ಕಂದಾಯ ಇಲಾಖೆಗೆ ಸಲ್ಲಿಸಿದೆ ಎಂದು ಹೇಳಿದರು.
ಆದರೆ ನೆಪಮಾತ್ರಕ್ಕೆ ಇತರೆ ಪ್ರಕರಣಗಳ ಲೋಪದಿಂದ ಇಬ್ಬರು ತಹಸಿಲ್ದಾರ್‌ರನ್ನು ಅಮಾನತು ಮಾಡಲಾಗಿದೆ. ಅಕ್ರಮ ಭೂಮಂಜೂರಾತಿ ಬಗ್ಗೆ ಉಪವಿಭಾಗಾಕಾರಿ ನ್ಯಾಯಾಲಯದಲ್ಲಿ ಸ್ವಯಂ ದೂರು ದಾಖಲಿಸಿಕೊಂಡು ಅಂದಿನ ಎಸಿ ವಿಚಾರಣೆ ಮಾಡಿದ್ದಾರೆ. ಆದರೆ ಈವರೆಗೂ ಯಾವ ಅಧಿಕಾರಿಗಳ ಮೇಲೂ ಶಿಸ್ತುಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.
ಕಡೂರು ಭೂ ಅಕ್ರಮ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿ ಎಚ್.ಎಲ್.ನಾಗರಾಜ್ ಅವರು ೨ ಲಾಗಿನ್ ತೆರೆದು ಅದರಲ್ಲಿ ಭೂ ಅಕ್ರಮ ನಡೆದಿರುವುದನ್ನು ಪತ್ತೆಹಚ್ಚಿದ್ದರು. ಇನ್ನುಳಿದ ೨ ಲಾಗಿನ್‌ಗಳನ್ನು ಹಾಗೆ ಬಿಟ್ಟಿದ್ದರು. ಅದನ್ನು ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದಾಗ ಒಟ್ಟು ೩೨೬ ಪ್ರಕರಣಗಳಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿತ್ತು. ಆಗ ಕಡೂರು ತಹಸೀಲ್ದಾರ್ ಉಮೇಶ್ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ರೈತ ಸಂಘ ಆಗ್ರಹಿಸಿತ್ತು. ಆದರೆ ಈವರೆಗೂ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ದೂರಿದರು.
ಈ ಘಟನೆಗೆ ಸಂಬAಧಿಸಿದAತೆ ಈಗಾಗಲೇ ಕರ್ನಾಟಕ ಲೋಕಾಯುಕ್ತದಲ್ಲಿ ಕೇಸು ದಾಖಲಾಗಿ ತನಿಖೆ ನಡೆಯುತ್ತಿದೆ. ಹೀಗಾಗಿ ಅಕ್ರಮ ಭೂ ಮಂಜೂರಾತಿಯಲ್ಲಿ ಪಾಲುದಾರರಾಗಿ ಆರೋಪಗಳನ್ನು ಹೊತ್ತಿರುವ ಎಲ್ಲ ಅಧಿಕಾರಿ, ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಬೇಕು. ಇಲ್ಲದಿದ್ದರೆ ತೀವ್ರತರದ ಹೋರಾಟ ರೂಪಿಸಲು ಸಂಘ ನಿರ್ಧರಿಸಲಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರೈತ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಕಾರ್ಯದರ್ಶಿ ಎಂ.ಬಿ.ಚAದ್ರಶೇಖರ್ ಮುಖಂಡರಾದ ಉಮೇಶ್, ಎಂ.ಸಿ.ಬಸವರಾಜು, ಬ್ಯಾಗಡೇಹಳ್ಳಿ ಬಸವರಾಜು ಮತ್ತಿತರರಿದ್ದರು.