ಭೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ: ಸಿಇಒ ರಾಹುಲ್ ತುಕಾರಾಂ ಪಾಂಡ್ವೆ

oplus_2
oplus_2
Published on

ರಾಯಚೂರು: ಭ್ರೂಣಲಿಂಗ ಪತ್ತೆ ಅಪರಾಧದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಕಚೇರಿಯ ಐಎಂಎ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘದಿಂದ ಹಮ್ಮಿಕೊಂಡಿದ್ದ ಕೆಪಿಎಂಇಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಗಳ ಅನುಷ್ಠಾನದ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಬಧವಾರ ಮಾತನಾಡಿದರು.

ಲಿಂಗಾನುಪಾತ ಸಮವಾಗಿರದಿದ್ದರೆ ಸಮಾಜದ ಸ್ವಾಸ್ತ್ಯ ಹಾಳಾಗುವುದರ ಜತೆಗೆ, ಹೆಣ್ಣಿನ ಮೇಲೆ ದೌರ್ಜನ್ಯ ಹೆಚ್ಚಾಗುವ ಸಾಧ್ಯತೆ ಇದೆ. ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕುರಿತು ನಗರ ಮತ್ತು ಪಟ್ಟಣಗಳಲ್ಲಿ ಸಾರ್ವಜನಿಕರಿಗೆ ಕಾನೂನು ನಿಯಮಗಳನ್ನು ಹೇಗೆ ಪಾಲಿಸಬೇಕೆಂಬುದರ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಸಿಪಿಎನ್‌ಡಿಟಿ ಕಾಯ್ದೆಯ ಉಪ ನಿರ್ದೇಶಕ ಡಾ.ವಿವೇಕ ದೊರೈ, ಡಿಎಚ್‌ಒ ಡಾ.ಸುರೇಂದ್ರಬಾಬು, ಐಎಂಎ ಜಿಲ್ಲಾಧ್ಯಕ್ಷ ಡಾ.ಶೈಲೇಶ ಅಮರಖೇಡ್, ಪಿಸಿಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷ ಡಾ.ಶಿವಪ್ಪ ಮಾಲಿ ಪಾಟೀಲ್, ರಿಮ್ಸ್ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಪಾಟೀಲ್, ಆರೋಗ್ಯ ಇಲಾಖೆಯ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ವೆಂಕಟೇಶ ನಾಯಕ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net