ಭ್ರಮೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು

Shivaram Hebbar
Published on


ಶಿರಸಿ: ರಾಜ್ಯದ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ಕಾರ್ವಿುಕ ಸಚಿವ ಶಿವರಾಮ ಹೆಬ್ಬಾರ ವ್ಯಂಗ್ಯವಾಡಿದರು.
ತಾಲೂಕಿನ ಗುಡ್ನಾಪುರ ಶ್ರೀಬಂಗಾರೇಶ್ವರ ದೇವರಿಗೆ ಬುಧವಾರ ಪೂಜೆ ಸಲ್ಲಿಸಿ ಬಳಿಕ ಕೆರೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ಬದಲಾವಣೆ ಅವಶ್ಯಕತೆ ಇಲ್ಲ. ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಕೂಡ ನಡೆಯಲಿದೆ ಎಂದರು.
ಪಕ್ಷದ ರಾಜ್ಯ ಅಧ್ಯಕ್ಷ ನಳೀನ್​ಕುಮಾರ್ ಕಟೀಲ್ ಅಧಿಕಾರ ಅವಧಿ ಬಳಿಕ ಪಕ್ಷದ ತೀರ್ವನವೇ ಅಂತಿಮ ಆಗಿರುತ್ತದೆ. ಆಯ್ಕೆ ವಿಚಾರ ವರಿಷ್ಠರಿಗೆ ಬಿಟ್ಟಿದ್ದು ಎಂದರು.
ರಾಜ್ಯದ ಹಲವೆಡೆ ಕೆರೆಕಟ್ಟೆಗಳು ತುಂಬಿವೆ. ಇದರಿಂದ ಬೆಳೆಗೆ ಅನುಕೂಲವಾಗುತ್ತಿದೆ. ಕೆಲವೆಡೆ ಅತಿ ಮಳೆಯಿಂದ ಸಮಸ್ಯೆಯಾಗಿದೆ. ಹಾನಿ ಪ್ರದೇಶದ ಸರ್ವೆ ಕಾರ್ಯ ಶೀಘ್ರವಾಗಿ ನಡೆಯುತ್ತಿದೆ. ವರದಿ ಬಂದ ಬಳಿಕ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದರು.
ಕೇಂದ್ರ ಸರ್ಕಾರ ರಾಸಾಯನಿಕ ಗೊಬ್ಬರಕ್ಕೆ ಸಬ್ಸಿಡಿ ಕೊಡುತ್ತಿದೆ. ಜತೆಗೆ ಕೆಡಿಸಿಸಿ ಬ್ಯಾಂಕ್ ಕೂಡ 900 ಕೋಟಿ ರೂ. ಬೆಳೆ ಸಾಲ ನೀಡಿದೆ. 500 ಕೋಟಿ ರೂ. ಮಾಧ್ಯಮಿಕ ಸಾಲ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ರೈತರು ಸಾವಯವ ಕೃಷಿಯತ್ತ ಒಲವು ತೋರಿಸಬೇಕು ಎಂದರು.
ಪಕ್ಷದ ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಎಪಿಎಂಸಿ ಅಧ್ಯಕ್ಷ ಪ್ರಶಾಂತ ಗೌಡರ, ಮಂಗಲಾ ನಾಯ್ಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net