

ಪಿರಿಯಾಪಟ್ಟಣ: ಭ್ರಷ್ಟಾಚಾರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಲ್ಪವೃಕ್ಷ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಪ್ರಶಾಂತ್‌ಗೌಡ ತಿಳಿಸಿದರು.
ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ತಾಲೂಕಿನ ಮಾಲಂಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವ ಮೂಲಕ ತಮ್ಮ ಜ್ಞಾನಾರ್ಜನೆ ವೃದ್ಧಿಸಿಕೊಳ್ಳಬೇಕು, ನಾಯಕತ್ವ ಗುಣ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ಹೇಳಿದರು.
ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ಪ್ರವೀಣ್ ಮಾತನಾಡಿ, ಸಂಸ್ಥೆ ವತಿಯಿಂದ ಗುಣಮಟ್ಟದ ಶಿಕ್ಷಣದ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್‌ಎಸ್‌ಎಸ್ ಶಿಬಿರಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ ಎಂದರು.
ಗ್ರಾಪಂ ಸದಸ್ಯ ಹರೀಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಯ ಪಾಲನೆ, ಸಂಸ್ಕಾರ ರೂಢಿಸಿಕೊಳ್ಳಲು ಶಿಬಿರ ಉತ್ತಮ ವೇದಿಕೆಯಾಗಿದೆ. ಗ್ರಾಮಸ್ಥರಿಗೆ ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ತಂಡಕ್ಕೆ ಧನ್ಯವಾದ ಹೇಳಿದರು.
ಶಿಬಿರದಲ್ಲಿ ಉತ್ತಮ ನಿರ್ವಹಣೆ ತೋರಿದ ವಿದ್ಯಾರ್ಥಿಗಳು, ಭಾಗವಹಿಸಿದ್ದವರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಮಾಲಂಗಿ ಪಿಡಿಒ ಆಶಾರಾಣಿ, ಬಿಜಿಎಸ್ ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಎಸ್.ಎಂ.ಮಹದೇವ್, ಸಹ ಶಿಬಿರಾಧಿಕಾರಿ ಅನುಶ್ರೀ, ಪ್ರಾಧ್ಯಾಪಕರಾದ ಇಲಿಯಾಸ್ ಖಾನ್, ಪ್ರತಾಪ್, ದಿವ್ಯಾ, ಚನ್ನಾಂಬಿಕಾ, ಸ್ವಾಮಿ, ಅಂಜಲಿ, ಮಾಲಂಗಿ ಗ್ರಾಪಂ ಅಧ್ಯಕ್ಷ ರವಿ, ಮುಖಂಡರಾದ ವಿಶ್ವನಾಥ್, ದಾಸೇಗೌಡ, ಉಮಾದೇವಿ, ವಸಂತ್, ಪುಟ್ಟರಾಜ್, ಸದಾನಂದ್, ಮಾದಯ್ಯ, ಕುಮಾರ್ ಇದ್ದರು.