ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ಪೊರಕೆ ಅಭಿಯಾನ

WEB SGR
Published on

ಸಾಗರ: ಕ್ಷೇತ್ರ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರಮುಕ್ತ ಸಮಾಜಕ್ಕಾಗಿ ಪೊರಕೆ ಅಭಿಯಾನ ಹಮ್ಮಿಕೊಂಡಿದೆ ಎಂದು ಆಪ್ ತಾಲೂಕು ಅಧ್ಯಕ್ಷ ಸತೀಶ್ ಗೌಡ ಹೇಳಿದರು.

ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಹಮ್ಮಿಕೊಂಡಿದ್ದ ಪೊರಕೆ ಅಭಿಯಾನದಲ್ಲಿ ಮಾತನಾಡಿದ ಅವರು, ತಾಲೂಕು ಕಚೇರಿಯಲ್ಲಿ ಅತಿಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಸಣ್ಣಪುಟ್ಟದಕ್ಕೂ ರೈತರು ಹಣ ಕೊಟ್ಟೆ ಕೆಲಸ ಮಾಡಿಕೊಳ್ಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆಮ್ಆದ್ಮಿ ಪಕ್ಷದಿಂದ ತಹಸೀಲ್ದಾರ್ ಕಚೇರಿ ಮೂಲಕವೇ ಪೊರಕೆ ಅಭಿಯಾನ ಪ್ರಾರಂಭಿಸಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ಕೈಗೊಂಡಿದೆ ಎಂದರು

ನಗರ ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಪೊರಕೆ ಅಭಿಯಾನ ರಾಷ್ಟ್ರವ್ಯಾಪಿ ನಡೆಯುತ್ತಿದೆ. ಸಾಗರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಾರ್ವಜನಿಕರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆಯೆ ವಿನಾ ಧ್ವನಿ ಎತ್ತುತ್ತಿಲ್ಲ. ಜನರ ಧ್ವನಿಯಾಗಿ ಆಮ್ಆದ್ಮಿ ಪಕ್ಷ ಕೆಲಸ ಮಾಡುತ್ತಿದೆ. ಪಕ್ಷದ ಚಿಹ್ನೆಯಾಗಿರುವ ಪೊರಕೆ ಮೂಲಕ ಭ್ರಷ್ಟಾಚಾರವನ್ನು ಗುಡಿಸುವ ಕೆಲಸ ಮಾಡಲಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net