ಭ್ರಷ್ಟಾಚಾರ ರಹಿತ, ಜನಸ್ನೇಹಿ ಆಡಳಿತ ನೀಡಲು ಪ್ರಯತ್ನ

15-08-Shiva-1
ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ನಿಮಿತ್ತ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್, ಎಸ್ಪಿ ಬಿ.ನಿಖಿಲ್ ಇದ್ದರು.
Published on

ರಾಯಚೂರು: ಭ್ರಷ್ಟಾಚಾರ ರಹಿತ ಮತ್ತು ಜನಸ್ನೇಹಿ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ. ವಾಗ್ದಾನ ನೀಡಿದಂತೆ ಐದು ಗ್ಯಾರಂಟಿಗಳನ್ನು ಈಡೇರಿಸುವಂತೆ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ನಿಮಿತ್ತ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವದ ಲ ಉನ್ನತ ಸ್ಥಾನಮಾನದಲ್ಲಿರುವವರಿಗೆ ಮಾತ್ರವಲ್ಲ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಅಹಿಂಸೆಯ ಮೂಲಕ ದೇಶವನ್ನು ಅಂಗ್ಲರ ಕಪಿಮುಷ್ಟಿಯಿಂದ ಮುಕ್ತಗೊಳಿಸಿರುವುದು ಇತಿಹಾಸ. ಸಮಾಜದಲ್ಲಿ ಸಮಾನತೆ, ಭಾತೃತ್ವ ಬೇರೂರಬೇಕು. ಸ್ವಾತಂತ್ರ ನಂತರ ಜವಾಹರಲಾಲ್ ನೆಹರು ಮುಂದಾಲೋಚನೆ, ದೂರದೃಷ್ಟಿಯಿಂದ ನವರತ್ನ ಯೋಜನೆಗಳು, ಐಐಟಿ, ಏಮ್ಸ್, ವಿಶ್ವ ವಿದ್ಯಾಲಯ ಸ್ಥಾಪಿಸು ಮೂಲಕ ದೇಶದ ಪ್ರಗತಿ ದಿಕ್ಕು ಬದಲಾವಣೆಗೆ ಕಾರಣರಾದರು.
ಜಿಲ್ಲೆಯ ಪಾರದರ್ಶಕ, ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಅಕಾರಿಗಳು ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್, ಎನ್‌ಎಸ್‌ಎಸ್ ಹಾಗೂ ವಿವಿಧ ಶಾಲೆಗಳ ತಂಡಗಳಿಂದ ಪಥ ಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಬಸನಗೌಡ ದದ್ದಲ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net