ಭ್ರೂಣಲಿಂಗ ಪತ್ತೆ ಮಾಹಿತಿ ನೀಡುವವರಿಗೆ ಬಹುಮಾನ

09ae3e80-d85c-4fd1-9b35-33928d37c357
Published on

ಬಾಗಲಕೋಟೆ: ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಗೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಗೆ ಅಥವಾ ಮಾಹಿತಿ ನೀಡುವವರಿಗೆ ಬಹುಮಾನದ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗಳ ವರೆಗೆ ಏರಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಆರ್.ಓ.ಪಿ ಕ್ರ.ಸಂ.19 13ರಲ್ಲಿ ಅನುಮೋದನೆಯಾಗಿರುವಂತೆ 50 ಸಾವಿರ ರೂ.ಗಳ ಬಹುಮಾನವಾಗಿ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಡಿಸೆಂಬರ 11, 2023 ರಂದು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೆಲ್ವಿಚಾರಣಾ ಮಂಡಳಿಯ ಸಭೆಯಲ್ಲಿ ಪಿಸಿ & ಪಿ.ಎನ್.ಡಿ.ಟಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೀಡುವ 50 ಸಾವಿರ ರೂ.ಗಳ ಮೊತ್ತವನ್ನು 1 ಲಕ್ಷ ರೂ.ಗಳಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಯಶಸ್ವಿಗೊಂಡ ಗುಪ್ತ ಕಾರ್ಯಾಚಣೆ, ಮಾಹಿತಿ ನೀಡುವವರಿಗೆ 50 ಸಾವಿರ ರೂ.ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಇನ್ನುಳಿದ 50 ಸಾವಿರ ಮೊತ್ತವನ್ನು ಜಿಲ್ಲೆಗಳಲ್ಲಿ ಸಂಗ್ರಹವಾಗಲಿರುವ ಪಿಸಿ & ಪಿ.ಎನ್.ಡಿ.ಟಿ ಶುಲ್ಕದಿಂದ ನೀಡುವಂತೆ ಸರಕಾರದ ಸುತ್ತೋಲೆಯಲ್ಲಿ ತಿಳಿಸಿದ್ದಾರೆಂದು ಜಿಲ್ಲಾಧಿಕಾರಿಗಳು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net