ಭ್ರೂಣಹತ್ಯೆ ಶಿಕ್ಷಾರ್ಹ ಅಪರಾಧ

2603 KLB 02
Published on

ಕಲಬುರಗಿ: ಗಂಡು-ಹೆಣ್ಣು ಮಗುವಿನ ಮಧ್ಯೆ ತಾರತಮ್ಯ ಮಾಡಬಾರದು. ಭ್ರೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ. ಭ್ರೂಣಹತ್ಯೆ ಮಾಡುವುದು ಅಮಾನವೀಯತೆಯಾಗಿದೆ. ಯಾರೂ ಕೆಟ್ಟ ಕೆಲಸಕ್ಕೆ ಕೈಹಾಕುವ ಪ್ರಯತ್ನ ಮಾಡಬಾರದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಹೇಳಿದರು.
ನಗರದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಏರ್ಪಡಿಸಿದ್ದ ಅಂತಾರಾಷ್ಟಿçÃಯ ಭ್ರೂಣಹತ್ಯೆ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿ, ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ. ಈ ಕೃತ್ಯದಲ್ಲಿ ಭಾಗವಹಿಸಿದ ವೈದ್ಯರು ಮತ್ತು ಗರ್ಭಿಣಿ ಸಂಬAಧಿಕರು ಇಬ್ಬರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ರಕೃತಿ ಸಮತೋಲನಕ್ಕೆ ಗಂಡು ಮತ್ತು ಹೆಣ್ಣು ಇಬ್ಬರು ಬೇಕು ಎಂದರು.
ಪ್ರಮುಖರಾದ ಶಿವಯೋಗೆಪ್ಪ ಬಿರಾದಾರ, ಅಸ್ಲಾಂ ಶೇಖ್, ಜಗನ್ನಾಥ ಗುತ್ತೇದಾರ, ಗುರುರಾಜ ಕೈನೂರ, ಗಂಗಾಜ್ಯೋತಿ ಗಂಜಿ, ಎಚ್.ಬಿ.ಪಾಟೀಲ್, ರೇಷ್ಮಾ ನಕ್ಕುಂದಿ, ಸಂಗಮ್ಮ ಅತನೂರ, ಮಂಗಲಾ ಚಂದಾಪುರೆ, ಶ್ರೀದೇವಿ ಸಾಗರ, ನಾಗಮ್ಮ ಚಿಂಚೋಳಿ, ಕಿರಣ, ಸಿದ್ರಾಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net