

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬುಧವಾರ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಪುತ್ರ ಸೂರಜ್ ಜತೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಧ್ಯಾಹ್ನ ದೇಗುಲಕ್ಕೆ ಆಗಮಿಸಿದ ಅವರು ಧೂಪ ಹಾಕಿ ದೇವರ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಸಲೆಂದು ಪಾರ್ಥನೆ ಸಲ್ಲಿಸಿದರು. ಬಳಿಕ ದೇಗುಲದ ಒಳಾಂಗಣದಲ್ಲಿನ ಕೊಠಡಿಯಲ್ಲಿ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಕೆಲ ಭಕ್ತರೊಂದಿಗೆ ಮಾತುಕತೆ ನಡೆಸಿದರು. ದೇಗುಲ ಹಾಗೂ ಮ.ಬೆಟ್ಟದ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆದು ತೆರಳಿದರು.