ಮ.ಬೆಟ್ಟಕ್ಕೆ ಸಾವಿರಾರು ಭಕ್ತರ ಭೇಟಿ

15 HANUR 4
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಶನಿವಾರ ಹಾಗೂ ಭಾನುವಾರ ಹೆಚ್ಚಿನ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಮ.ಬೆಟ್ಟಕ್ಕೆ ಜಾತ್ರೆ ವೇಳೆ, ಅಮವಾಸ್ಯೆ ಹಾಗೂ ಇನ್ನಿತರ ವಿಶೇಷ ದಿನಗಳಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವುದು ಸಾಮಾನ್ಯ. ಆದರೆ, ವಾರ‌್ಯಂತದ 2ನೇ ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಇದ್ದ ಕಾರಣ ಸಾವಿರಾರು ಭಕ್ತರು ಭೇಟಿ ನೀಡಿದ್ದರು. ಶಕ್ತಿ ಯೋಜನೆ ಪರಿಣಾಮ ಸಾರಿಗೆ ಬಸ್‌ಗಳಲ್ಲಿ ಹೆಚ್ಚಿನ ಮಹಿಳೆಯರು ಆಗಮಿಸಿದ್ದರು.

ಉತ್ಸವದಲ್ಲಿ ಭಾಗಿಯಾದ ಭಕ್ತರು:

ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರೆ, ಕೆಲವರು 500 ರೂ.ಟಿಕೆಟ್ ಪಡೆದು ವಿಶೇಷ ಕೌಂಟರ್ ಮೂಲಕ ದರ್ಶನ ಪಡೆದರು. ಸನ್ನಿಧಿಯ ಆವರಣದಲ್ಲಿ ಜರುಗಿದ ಬಸವ, ಹುಲಿ ಹಾಗೂ ರುದ್ರಾಕ್ಷಿ ಉತ್ಸವಾದಿ ಸೇವೆಗಳಲ್ಲಿ ಭಾಗಿಯಾಗಿದ್ದರು. ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ನೆರವೇರಿಸಿದರು. ಸಂಜೆ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಕ್ತರು ಭಾಗಿಯಾಗಿದ್ದರು. ಪ್ರಾಧಿಕಾರದಿಂದ ಕುಡಿಯುವ ನೀರು, ದಾಸೋಹ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net