ಮ.ಬೆಟ್ಟದ ಅಂಗಡಿಗಳಲ್ಲಿ ಗ್ರಾಹಕರಿಗೆ ವಂಚನೆ

09 HANUR 2
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಡದ ಅಂಗಡಿಗಳಲ್ಲಿ ಅವಧಿ ಮುಗಿದಿರುವ ಆಹಾರ ಪದಾರ್ಥಗಳ ಮಾರಾಟಕ್ಕೆ ನಿಷೇಧ ಹಾಗೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕುವಂತೆ ಭಕ್ತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮ.ಬೆಟ್ಟಕ್ಕೆ ಜಾತ್ರಾ ಹಾಗೂ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇಲ್ಲಿನ ಅಂಗಡಿಗಳಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಾರೆ. ಆದರೆ ಇತ್ತೀಚಿಗೆ ಕೆಲವು ಅಂಗಡಿಗಳಲ್ಲಿ ಅವಧಿ ಮುಗಿದಿರುವ ಗುಣಮಟ್ಟ ಕಳೆದುಕೊಂಡ ಆಹಾರ ಪದಾರ್ಥ ಹಾಗೂ ಪಾನೀಯಗಳನ್ನು ಮಾರಾಟ ಮಾಡಲಾಗುತ್ತಿದೆ. ಜತೆಗೆ ನೀರು ಹಾಗೂ ಪಾನೀಯ ಬಾಟಲಿಯನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ತೀವ್ರ ಆಕ್ಷೇಪ ಕೇಳಿಬಂದಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಲ್ಲದೇ ಈ ಸಂಬಂಧ ಶ್ರೀಮಲೆಮಹದೇಶ್ವರ ಸ್ವಾಮಿ ದಕ್ಷಿಣ ದ್ವಾರ ಹನೂರು ಕ್ಷೇತ್ರ ಫೇಸ್‌ಬುಕ್ ಖಾತೆ ಹಾಗೂ ಇತರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಭಕ್ತರು ಗಮನಿಸಿ ಆಹಾರ ಪದಾರ್ಥ ಹಾಗೂ ಪಾನೀಯಗಳನ್ನು ಖರೀದಿಸುವಂತೆ ಮನವಿ ಮಾಡಲಾಗಿದೆ. ಜತೆಗೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಕ್ಕೆ ಅಧಿಕಾರಿಗಳು ಕಡಿವಾಣ ಹಾಕುವ ಮೂಲಕ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net