ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸಿಎಂ ಸುಳಿವು

images (6)
Published on


ಮಂಗಳೂರು: ಉಗ್ರ ಚಟುವಟಿಕೆಗಳ ನಂಟು ಹೊಂದಿರುವ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎನ್‌ಐಎ ಕಚೇರಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ಕರಾವಳಿಗೆ ಪ್ರವಾಸ ಕೈಗೊಂಡಿದ್ದ ಅವರು ಹಿಂತಿರುಗುವ ವೇಳೆ ಸರ್ಕೀಟ್ ಹೌಸ್‌ಗೆ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಅವರು ಈಗಾಗಲೇ ಎರಡು ಸಭೆಗಳನ್ನು ನಡೆಸಿದ್ದಾರೆ. ಮುಂದೆಯೂ ಕೆಲವು ಸಭೆಗಳು ನಡೆಯಲಿವೆ ಎಂದರು.
ಮುಂಬರುವ ದಿನಗಳಲ್ಲಿ ಗೃಹ ಸಚಿವರು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net