ಮಂಗಳೂರು ಏರ್‌ಪೋರ್ಟ್‌ನಲ್ಲಿ 17 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ

IMG_20211012_121016
Published on

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಪತ್ತೆ ಹಚ್ಚಿದ್ದಾರೆ.

ಕೇರಳದ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ದುಬೈನಿಂದ ಹೊರಟ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳವಾರ ನಸುಕಿನಜಾವ 2 ಗಂಟೆ‌ ಸುಮಾರಿಗೆ ಮಂಗಳೂರು ನಿಲ್ದಾಣ ತಲುಪಿದೆ. ತಪಾಸಣೆ ವೇಳೆ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ದ್ರವರೂಪದಲ್ಲಿ ಪತ್ತೆಯಾಗಿದೆ. ಇದನ್ನು ಗಮ್‌ನೊಂದಿಗೆ ಮಿಶ್ರಣ ಮಾಡಿ, ಕಂದು ಬಣ್ಣದ ಶೀಟ್‌ವೊಂದರಲ್ಲಿ ಪ್ರಯಾಣಿಕ ಅಡಗಿಸಿಟ್ಟಿದ್ದ. ಇದನ್ನು ಟ್ರಾಲಿಯ ಕೆಳಭಾಗದ ಎರಡು ಪದರುಗಳ ಆಳದಲ್ಲಿ ಇರಿಸಿ, ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ತಪಾಸಣೆ ವೇಳೆ ಈ ಪ್ರಯಾಣಿಕ ಅಕ್ರಮ‌ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net