ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಸಾಗಾಟ ಪತ್ತೆ

Published on

ಮಂಗಳೂರು: ಇಲ್ಲಿನ ಅಂ.ರಾ.ವಿಮಾನ ನಿಲ್ದಾಣದಲ್ಲಿ ಮತ್ತೊಂದು ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ದುಬೈಯಿಂದ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ನಿವಾಸಿ ಶಾಹಿಕ್ ಹನೀಫ್ (26) ಟ್ರಾಲಿ ಚಕ್ರದಲ್ಲಿ ಮತ್ತು ಮಕ್ಕಳ ಆಟಿಕೆಯಲ್ಲಿ ಚಿನ್ನ ಇಟ್ಟು ಸಾಗಾಟ ಮಾಡಿರುವುದು ಪತ್ತೆಯಾಗಿದೆ.

ಒಟ್ಟು 19,01,460 ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ 50 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net